ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಸತ್ಯಜಿತ್ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ಆದ ನಳಿನ್ಕುಮಾರ್ ಕಟೀಲ್ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.
ಬಹುಬೇಡಿಕೆಯ ಪೋಷಕ ನಟನಾಗಿದ್ದ ನಟ ಸತ್ಯಜಿತ್ ‘ಅರುಣ ರಾಗ’, ‘ಅಂತಿಮ ತೀರ್ಪು’, ‘ಶಿವ ಮೆಚ್ಚಿದ ಕಣ್ಣಪ್ಪ’, ‘ರಣರಂಗ’, ‘ಉಪ್ಪಿ 2’-ಹೀಗೆ 650ಕ್ಕೂ ಅಧಿಕ ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ನಟ ಸತ್ಯಜಿತ್ ಪೋಷಕ ಪಾತ್ರ ಹಾಗೂ ನೆಗೆಟಿವ್ ಪಾತ್ರಗಳಲ್ಲಿ ಹೆಚ್ಚು ಗಮನ ಸೆಳೆದಿದ್ದರು ಎಂದು ನೆನಪಿಸಿದ್ದಾರೆ.
ಮೃತರ ಕುಟುಂಬ, ಬಂಧುಮಿತ್ರರಿಗೆ ಹಾಗೂ ಅಭಿಮಾನಿಗಳಿಗೆ ಈ ದುಃಖ ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ನಳಿನ್ಕುಮಾರ್ ಕಟೀಲ್ ಅವರು ಪ್ರಾರ್ಥಿಸಿದ್ದಾರೆ.
ಹಲವು ಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಸತ್ಯಜಿತ್ ಅವರು ಭಾನುವಾರ ಬೌರಿಂಗ್ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.