ಸಾಲು – ಸಾಲು ಚಿತ್ರಗಳು ಬಿಡುಗಡೆ : ಪ್ರೇಕ್ಷಕರಲ್ಲಿ ಜಗ್ಗೇಶ್ ಮನವಿ

ಬೆಂಗಳೂರು: ದಸರಾ ಹಬ್ಬದ ಪ್ರಯುಕ್ತ ಹಾಗೂ ಈ ತಿಂಗಳಿನಿಂದ ಬಿಡುಗಡೆಯಾಗುತ್ತಿರುವ ಕನ್ನಡದ ಎಲ್ಲ ಸಿನಿಮಾಗಳನ್ನು ಚಿತ್ರಮಂದಿರಗಳಲ್ಲಿ ವೀಕ್ಷಿಸಿ ಪ್ರೋತ್ಸಾಹಿಸಿ ಎಂದು ಕನ್ನಡದ ಸ್ಯಾಂಡಲ್ವುಡ್‍ನ ಹಿರಿಯ ನಟ ಜಗ್ಗೇಶ್ ಅವರು ಮನವಿ ಮಾಡಿದ್ದಾರೆ.
ಚಿತ್ರಮಂದಿರಗಳ ಹೌಸ್‍ಫುಲ್ ಪ್ರದರ್ಶನಕ್ಕೆ ಅನುಮತಿ ನೀಡಿದ್ದರಿಂದ ದಸರಾ ಹಬ್ಬಕ್ಕೆ ಕನ್ನಡ ಚಿತ್ರರಂಗಕ್ಕೆ ಸುಗ್ಗಿಯ ಕಾಲವಾದಂತಾಗಿದೆ. ದುನಿಯಾ ವಿಜಯ್ ನಟಿಸಿ ನಿರ್ದೇಶಿಸಿರುವ ‘ಸಲಗ’ ಹಾಗೂ ಕಿಚ್ಚ ಸುದೀಪ್ ಅವರ ‘ಕೋಟಿಗೊಬ್ಬ-3’ ಸಿನಿಮಾಗಳು ಒಂದೇ ದಿನ ತೆರೆ ಕಾಣುತ್ತಿರುವುದು ಒಂದೆಡೆಯಾದರೆ, ಹಲವು ಹೊಸಬರ ಸಿನಿಮಾಗಳು ಕೂಡ ಈ ತಿಂಗಳಿನಲ್ಲಿಯೇ ಚಿತ್ರಮಂದಿರಗಳಿಗೆ ಲಗ್ಗೆ ಇಡಲು ಸಾಲುಗಟ್ಟಿ ನಿಂತಿವೆ.

ಈ ಬಗ್ಗೆ ಟ್ವೀಟ್ ಮಾಡಿರುವ ಜಗ್ಗೇಶ್, ಆತ್ಮೀಯ ಕನ್ನಡದ ಬಂಧುಗಳೆ ಕೋವಿಡ್ ಸರ್ವ ದೇಶದ ಜನರನ್ನು ಸಂಕಷ್ಟಕ್ಕೆ ದೂಡಿತು. ಇಂಥ ಸಂಕಷ್ಟ ಸಮಯದಲ್ಲಿ ಅಲ್ಪಸ್ವಲ್ಪ ಜನರಿಗೆ ಸಂತೋಷ ನೀಡಿದ್ದು ಕಲೆ, ಅದು ಯಾವುದೆ ಭಾಷೆಯದ್ದಾಗಲಿ. ಚಿತ್ರಮಂದಿರ ಬಂದ್ ಆದರು ಸಣ್ಣ ಪರದೆಯಲ್ಲಿ ನಿಮ್ಮ ನ್ನು ರಂಜಿಸಿತು. ಅಂಥ ಕಲಾರಂಗ ಮತ್ತೆ ಚಿಗುರಿ ನಿಮ್ಮ ಮುಂದೆ ನಿಲ್ಲಬೇಕು ಎಂದರೆ ನೀವು ಹರಸಬೇಕು ಎಂದಿದ್ದಾರೆ.

ಇಂದು 100% ಚಿತ್ರಮಂದಿರ ತೆರೆದಿದೆ, ನಿಮ್ಮ ನೆಚ್ಚಿನ ನಟ-ನಟಿಯರ ಚಿತ್ರಗಳು ಇದೆ ಅಕ್ಟೋಬರನಿಂದ ತೆರೆಗೆ ಬರುತ್ತಿವೆ. ಕುಟುಂಬ ಸಮೇತ ನಿಮ್ಮ ನೆಚ್ಚಿನ ಚಿತ್ರಗಳನ್ನ ಚಿತ್ರಮಂದಿರದಲ್ಲೆ ನೋಡಿ ಆನಂದಿಸಿ. ಈ ಅಕ್ಟೋಬರ್ ಇಂದ ನನ್ನ ಆತ್ಮೀಯ ಕನ್ನಡದ ಕಲಾಬಂಧುಗಳ ಚಿತ್ರ ಬಿಡುಗಡೆಯಾಗುತ್ತಿವೆ. ನಿಮ್ಮ ಸಂತೋಷ ಚಪ್ಪಾಳೆ ಸದ್ಧಿಗೆ ಕಾಯುತ್ತಿದೆ ಕಲಾರಂಗ ಎಂದಿದ್ದಾರೆ

Raksha Deshpande

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

6 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

6 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

6 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

6 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

8 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

8 hours ago