ಸಾಲು ಸಾಲು ಸಿನಿಮಾಗಳಲ್ಲಿ ಬಿಝಿಯಾದ ನಟಿ ಆಶಿಕಾ

ನಟಿ ಆಶಿಕಾ ಕುತೂಹಲದಿಂದ ಎದುರು ನೋಡುತ್ತಿದ್ದಾರೆ. ಅವರ ಕುತೂಹಲ ಕೇವಲ ಒಂದು ವಾರಕ್ಕೆ ಸೀಮಿತವಾಗಿಲ್ಲ. ಡಿಸೆಂಬರ್‌ ಮೊದಲ ವಾರದಿಂದ ಆರಂಭವಾಗಿ ಜನವರಿವರೆಗೂ ಮುಂದುವರೆಯಲಿದೆ! ಹೀಗೆಂದರೆ ನಿಮಗೆ ಆಶ್ಚರ್ಯವಾಗಬಹುದು.ನಾವು ಹೇಳುತ್ತಿರೋದು ನಟಿ ಆಶಿಕಾ ಕೈಯಲ್ಲಿರುವ ಸಿನಿಮಾಗಳ ಬಗ್ಗೆ.

ಸದ್ಯ ಆಶಿಕಾ ಕನ್ನಡದ ಬಿಝಿ ನಟಿ. ಕಳೆದ ಒಂದೆರಡು ವಾರದಲ್ಲಿ ನಾಲ್ಕು ಬಾರಿ ಸಿನಿಮಾ ಪತ್ರಿಕಾಗೋಷ್ಠಿ ಎದುರಿಸಿದ ನಟಿ. ಅದಕ್ಕೆ ಕಾರಣ ಬಿಡುಗಡೆಗೆ ಸಿದ್ಧವಾಗಿರುವ ಆಶಿಕಾ ಚಿತ್ರಗಳು.

ಸದ್ಯ ಆಶಿಕಾ ನಟಿಸಿರುವ ಮೂರು ಚಿತ್ರಗಳು ಒಂದರ ಹಿಂದೊಂದರಂತೆ ಬಿಡುಗಡೆಯಾಗುತ್ತಿದೆ. ಆಶಿಕಾ ನಾಯಕಿಯಾಗಿ ನಟಿಸಿರುವ “ಮದಗಜ’ ಚಿತ್ರ ಇಂದು ಬಿಡುಗಡೆಯಾಗುತ್ತಿದೆ. ಈ ಚಿತ್ರದಲ್ಲಿ ಆಶಿಕಾ ಸಖತ್‌ ವಿಭಿನ್ನ ಪಾತ್ರದಲ್ಲಿ ನಟಿಸಿದ್ದಾರಂತೆ. ಪಲ್ಲವಿ ಎಂಬ ಸಖತ್‌ ಬೋಲ್ಡ್‌ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರಂತೆ. ಇದು ಈ ವಾರದ ಕಥೆಯಾದರೆ, ಮುಂದಿನ ವಾರ ಮತ್ತೂಂದು. ಶರಣ್‌ ನಾಯಕರಾಗಿರುವ “ಅವತಾರ್‌ ಪುರುಷ’ ಚಿತ್ರ ಡಿಸೆಂಬರ್‌ 10ರಂದು ತೆರೆಗೆ ಬರುತ್ತಿದೆ. ಈ ಚಿತ್ರದಲ್ಲೂ ಆಶಿಕಾ ನಾಯಕಿ. ಸುನಿ ನಿರ್ದೇಶನದ ಈ ಚಿತ್ರದಲ್ಲೂ ಹೊಸ ಬಗೆಯ ಪಾತ್ರದಲ್ಲಿ ಆಶಿಕಾ ಕಾಣಿಸಿಕೊಂಡಿದ್ದಾರೆ.

ಇದು ಡಿಸೆಂಬರ್‌ನಲ್ಲಿ ಬಿಡುಗಡೆಯಾಗುತ್ತಿರುವ ಸಿನಿಮಾಗಳ ಸಂಖ್ಯೆಯಾದರೆ ಜನವರಿಯಲ್ಲಿ ಆಶಿಕಾ ನಟನೆಯ ಮತ್ತೂಂದು ಚಿತ್ರ ಬಿಡುಗಡೆಯಾಗುತ್ತಿದೆ. ಅದು “ರೆಮೋ’. ಪವನ್‌ ಒಡೆಯರ್‌ ನಿರ್ದೇಶನದ ಅಪ್ಪಟ ಲವ್‌ಸ್ಟೋರಿಯಾಗಿರುವ ಈ ಚಿತ್ರದಲ್ಲಿ ಆಶಿಕಾ ನಾಯಕಿಯಾಗಿ ನಟಿಸಿದ್ದಾರೆ. ಹೀಗೆ ಸಾಲು ಸಾಲು ಸಿನಿಮಾಗಳಲ್ಲಿ ಆಶಿಕಾ ಬಿಝಿಯಾಗಿದ್ದಾರೆ. ಇದರ ಜೊತೆಗೆ ಒಂದಷ್ಟು ಸಿನಿಮಾಗಳ ಚಿತ್ರೀಕರಣ ಕೂಡಾ ನಡೆಯುತ್ತಿದೆ.

Gayathri SG

Recent Posts

ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಮಹಾಲಕ್ಷ್ಮಿ ಯೋಜನೆಯಡಿ 1 ಲಕ್ಷ ರೂ. ಜಮಾ

ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಇಬ್ಬರು ಹೆಂತಿಯರು ಇರುವವರಿಗೆ 2 ಲಕ್ಷ ರೂ. ಆರ್ಥಿಕ ನೆರವು…

2 mins ago

ಕಿಂಗ್ಸ್‌-ರಾಯಲ್ಸ್‌ ಕದನದಲ್ಲಿ ಕಲಾಶ್‌ನಿಕಾವೋ: ಕೊಹ್ಲಿ ಕೆಣಕಿ ಉಳಿದವರುಂಟೇ

ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಆರ್‌ ಸಿ ಬಿ ತಂಡ ಪಂಜಾಬ್ ಕಿಂಗ್ಸ್ ಅನ್ನು 60 ರನ್‌ಗಳಿಂದ…

18 mins ago

ಭಾರೀ ಗಾಳಿ ಮಳೆಗೆ ಮನೆಯ ಗೇಟ್ ಬಿದ್ದು ಬಾಲಕಿ ಮೃತ್ಯು

ಮಳೆ ಜತೆಗೆ ರಭಸವಾಗಿ ಬೀಸಿದ ಬಿರುಗಾಳಿಗೆ ಮನೆಯ ಗೇಟ್ ಕಿತ್ತು ಬಂದಿದ್ದು, ಇದೇ ವೇಳೆ ಮನೆಯ ಮುಂದೆ ಆಟವಾಡುತ್ತಿದ್ದ 7…

21 mins ago

ʼಮೇ 18-19 ಹಳ್ಳಿಗಟ್ಟು ಬೋಡ್ ನಮ್ಮೆ: ಮೇ 11 ರಂದು ದೇವ ಕಟ್ಟ್ ಬೀಳುವುದುʼ

ಕೆಸರಿನ ಓಕುಳಿಯ ಹಬ್ಬವೆಂದು ಖ್ಯಾತಿ ಪಡೆದಿರುವ ಹಳ್ಳಿಗಟ್ಟು ಶ್ರೀ ಭದ್ರಕಾಳಿ ಹಾಗೂ ಶ್ರೀ ಗುಂಡಿಯತ್ ಅಯ್ಯಪ್ಪ ದೇವರ ವಾರ್ಷಿಕ ಬೋಡ್…

44 mins ago

ಪೂಜೆಗೆ ಅರಳಿ ಹೂವು ಬಳಕೆ ನಿಲ್ಲಿಸಲು ಟಿಡಿಬಿ ತೀರ್ಮಾನ

ಕೇರಳದ ತಿರುವಾಂಕೂರು ದೇವಸ್ಥಾನ ಆಡಳಿತ ಮಂಡಳಿಯು (ಟಿಡಿಬಿ) ತನ್ನ ಸುಪರ್ದಿಯಲ್ಲಿರುವ ದೇವಾಲಯಗಳಲ್ಲಿ ಪೂಜೆಗೆ ಅರಳಿ ಹೂವು (ಒಲಿಯಾಂಡರ್‌-ಕಣಗಿಲು ಜಾತಿಗೆ ಸೇರಿದ…

1 hour ago

50 ಕೋ. ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಮಂತ್ರಿಮಾಲ್‌: ಬೀಗ ಜಡಿದ ಬಿಬಿಎಂಪಿ

ಸರಿ ಸುಮಾರು 50 ಕೋಟಿಗಿಂತ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಬೆಂಗಳೂರಿನ ಪ್ರತಿಷ್ಠಿತ ಮಾಲ್‌ಗೆ ಬಿಬಿಎಂಪಿ ಬೆಳ್ಳಂಬೆಳಗ್ಗೆಯೇ  ಬೀಗ…

1 hour ago