ಸುಳ್ಳು ಆಪಾದನೆ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುವ ಎಚ್ಚರಿಕೆ ನೀಡಿದ ಜಗ್ಗೇಶ್

ಬೆಂಗಳೂರು: ಸುಳ್ಳು ಆಪಾದನೆ ಮಾಡಿರುವರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುತ್ತೇನೆ ಎಂದು ಸ್ಯಾಂಡಲ್‍ವುಡ್ ನಟ ಜಗ್ಗೇಶ್ ಟ್ವೀಟ್ ಮೂಲಕವಾಗಿ ಮಾಹಿತಿ ನೀಡಿದ್ದಾರೆ.
ಸಂಬಂಧವಿಲ್ಲದೆ ನನ್ನ ಹೆಸರು ಹಾಗೂ ಆರ್ ಅಶೋಕ್ ಅವರ ಹೆಸರು ತೆಗೆದು ರಘು ಎಂಬವರು ಅಪಮಾನಿಸಿದ್ದಾರೆ. ಇದು ನನಗೆ ಬಹಳ ನೋವುಂಟು ಮಾಡಿದೆ. ಹೀಗಾಗಿ ಸಂಬಂಧವಿಲ್ಲದೆ ನನ್ನ ಬಗ್ಗೆ ಸುಳ್ಳು ಆಪಾದನೆ ಮಾಡಿರುವ ಮಾನ್ಯ ರಘುರವರ ಮೇಲೆ ಮಾನನಷ್ಟ ಆಪಾದನೆ ದಾಖಲಿಸುತ್ತಿರುವೆ. ದಯಮಾಡಿ ಯಾರೆ ಆಗಲಿ ಸತ್ಯ ಅರಿತು ನುಡಿಯುವ ಗುಣ ಬೆಳಸಿಕೊಳ್ಳಿ ಎಂದು ಜಗ್ಗೇಶ್ ಟ್ವೀಟ್ ಮಾಡಿದ್ದಾರೆ.
ದಲಿತ ಸಂಘರ್ಷದ ರಾಜ್ಯಾಧ್ಯಕ್ಷ ರಘು ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ್ದು, ಇಷ್ಟು ದಿನ ಕೇವಲ ಬಿಬಿಎಂಪಿ ಅಧಿಕಾರಿಗಳು ಅಕ್ರಮದಲ್ಲಿ ಶಾಮೀಲಾಗುತ್ತಿದ್ದರು. ಆದರೆ ಈ ಬಾರಿ ಪಾಲಿಕೆಯ ಭ್ರಷ್ಟಚಾರ ಸ್ಯಾಂಡಲ್‍ವುಡ್‍ಗೆ ಅಂಟಿಕೊಂಡಿದೆ. ಪಾಲಿಕೆ ವ್ಯಾಪ್ತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ 16,167 ಮಕ್ಕಳಿಗೆ ಸ್ವೆಟರ್ ಪೂರೈಕೆ ಮಾಡುವ ಜವಾಬ್ದಾರಿಯನ್ನು ನಟ ಜಗ್ಗೇಶ್ ತಮ್ಮ ಕೋಮಲ್ ಹೊತ್ತಿದ್ದರು. ಅವರಿಗೆ 1.75 ಕೋಟಿ ರೂ. ಹಣ ಬಿಡುಗಡೆ ಆಗಿದೆ. ಆರ್ ಅಶೋಕ್, ನಟ ಜಗ್ಗೇಶ್ ಅವರು ಒತ್ತಡ ಹಾಕಿಸಿ ಹಣ ಬಿಡುಗಡೆ ಮಾಡಿಸಿದ್ದರು. ಆದರೆ ಕೋವಿಡ್ ಕಾರಣದಿಂದ ಕಳೆದ ವರ್ಷ ತರಗತಿಗಳೇ ನಡೆದಿಲ್ಲ. ಸ್ವೆಟರ್ ಹಂಚಿಕೆ ಮಾಡದೆಯೇ 1.75 ಕೋಟಿ ರೂ. ಹಣ ಪಡೆದಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

Indresh KC

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

3 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

3 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

3 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

4 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

5 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

5 hours ago