ಸ್ಯಾಂಡಲ್ ವುಡ್ ನ ಹಿರಿಯ ನಟ ಶಿವರಾಂ ಅವರು ಅಪಘಾತಕ್ಕೀಡಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಳೆದ 3 ದಿನಗಳ ಹಿಂದೆ ಕಾರಿನಲ್ಲಿ ತೆರಳುವ ವೇಳೆ ಅಪಘಾತ ಸಂಭವಿಸಿತ್ತು. ಚಿಕಿತ್ಸೆ ಬಳಿಕ ಮನೆಗೆ ಮರಳಿದ ಶಿವರಾಂ ಅವರ ಸ್ಥಿತಿ ಮತ್ತೆ ಗಂಭೀರವಾಗಿದೆ ಎಂದು ಹೊಸಕೆರೆಹಳ್ಳಿಯಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ನಟ ಶಿವರಾಂ ಅವರ ಪುತ್ರ ರವಿಶಂಕರ್, ಕಳೆದ ಮೂರು ದಿನಗಳ ಹಿಂದೆ ಅಪಘಾತ ನಡೆದಿದ್ದು, ಆಸ್ಪತ್ರೆಯಿಂದ ಬಿಡುಗಡೆಯಾದ ಬಳಿಕ ಮನೆಯ ರೂಂ ನಲ್ಲಿ ಬಿದ್ದು, ತಲೆಗೆ ಬಲವಾದ ಪೆಟ್ಟು ಬಿದ್ದಿದೆ. ಸ್ಕ್ಯಾನಿಂಗ್ ಮಾಡಿಸಲಾಗಿದ್ದು, ಮೆದುಳಿನಲ್ಲಿ ತೀವ್ರ ರಕ್ತಸ್ರಾವ ಉಂಟಾಗಿರುವುದು ರಿಪೋರ್ಟ್ ನಲ್ಲಿ ತಿಳಿದಿದೆ.
ತಂದೆಗೆ ವಯಸ್ಸಾಗಿರುವುದರಿಂದ ಸರ್ಜರಿ ಮಾಡಲು ಸಾಧ್ಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಸದ್ಯ ಅವರನ್ನು ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದರು.