News Karnataka Kannada
Monday, May 06 2024
ಸಾಂಡಲ್ ವುಡ್

ಹಿರಿಯ ನಟ ಶಿವರಾಂ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರ:ಕ್ಷಣ ಕ್ಷಣಕ್ಕೂ ಆರೋಗ್ಯ ಕ್ಷೀಣ

Shivaram Actor
Photo Credit :

ಬೆಂಗಳೂರು: ಸ್ಯಾಂಡಲ್ ವುಡ್ ಹಿರಿಯ ನಟ ಶಿವರಾಂ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರವಾಗಿದೆ. ಕ್ಷಣ ಕ್ಷಣಕ್ಕೂ ಅವರ ಆರೋಗ್ಯ ಕ್ಷೀಣಿಸುತ್ತಿದೆ. ಬೆಳಿಗ್ಗೆ 10 ಗಂಟೆಯ ನಂತರ ಆಸ್ಪತ್ರೆಯಿಂದ ಶಿವರಾಂ ಅವರ ಆರೋಗ್ಯದ ಕುರಿತಾಗಿ ಮಾಹಿತಿ ನೀಡಲಾಗುವುದು.ಶಿವರಾಂ ಕೋಮಾಸ್ಥಿತಿ ತಲುಪಿರುವುದರಿಂದ ಕುಟುಂಬದವರು, ಅಭಿಮಾನಿಗಳ ವಲಯದಲ್ಲಿ ಆತಂಕ ಮೂಡಿದೆ. ಸ್ಯಾಂಡಲ್ವುಡ್ ನ ಅನೇಕ ಹಿರಿಯ ಕಲಾವಿದರು ಆಸ್ಪತ್ರೆಗೆ ಭೇಟಿ ನೀಡಿ ಶಿವರಾಂ ಅವರ ಆರೋಗ್ಯ ವಿಚಾರಿಸಿದ್ದಾರೆ.

ಮಿದುಳು ನಿಷ್ಕ್ರಿಯಗೊಂಡು ಶಿವರಾಂ ಕೋಮಾ ಸ್ಥಿತಿಯಲ್ಲಿದ್ದಾರೆ. ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಮುಂದುವರೆಸಲಾಗಿದೆ. ಬೆಂಗಳೂರಿನ ಸೀತಾ ಸರ್ಕಲ್ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ಮುಂದುವರಿಸಲಾಗಿದೆ.

ಸಿನಿಮಾ ಮಾತ್ರವಲ್ಲದೆ ಕಿರುತೆರೆಯಲ್ಲಿಯೂ ಶಿವರಾಂ ಅಭಿನಯಿಸಿದ್ದಾರೆ. ಆರು ದಶಕಗಳಿಗೂ ಹೆಚ್ಚು ಅವಧಿಯಿಂದ ಅವರು ಚಿತ್ರರಂಗದಲ್ಲಿ ಸೇವೆ ಸಲ್ಲಿಸಿದ್ದಾರೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು