2.7 ಮಿಲಿಯನ್ ಗೂ ಅಧಿಕ ವೀಕ್ಷಣೆ ಪಡೆದ ಕೆಜಿಎಫ್ 2 ಚಿತ್ರದ ‘ಗಗನ ನೀ..’ ಹಾಡು

ಸ್ಯಾಂಡಲ್‌ವುಡ್‌: ‘ಕೆಜಿಎಫ್ ಚಾಪ್ಟರ್ 2’ ಚಿತ್ರದ ತಂಡ ಮತ್ತೊಂದು ಹಾಡನ್ನು ಬಿಡುಗಡೆ ಮಾಡಿದೆ. ಮಾತೃ ಪ್ರೇಮದ ‘ ಗಗನ ನೀ..’ ಹಾಡು ಬುಧವಾರ ಬಿಡುಗಡೆಯಾಗಿದ್ದು, 22 ಗಂಟೆಯಲ್ಲಿ 2.7 ಮಿಲಿಯನ್ ಗೂ ಅಧಿಕ ವೀಕ್ಷಣೆ ಪಡೆದಿದೆ.

ಪ್ರಶಾಂತ್ ನೀಲ್ ನಿರ್ದೇಶನದ ‘ಕೆಜಿಎಫ್ ಚಾಪ್ಟರ್ 2’ ಚಿತ್ರದ ಈ ಹಾಡಿನಲ್ಲಿ ಅರ್ಚನಾ ಜೋಯಿಸ್ ಕಾಣಿಸಿಕೊಂಡಿದ್ದಾರೆ.ಚಿತ್ರದಲ್ಲಿ ಯಶ್ ತಾಯಿಯ ಪಾತ್ರದಲ್ಲಿ ನಟಿಸಿರುವ ಅರ್ಚನಾ ಜೋಯಿಸ್ ಅವರ ಸುತ್ತ ಈ ಹಾಡು ಚಿತ್ರಿತವಾಗಿದೆ.

ಗಗನ ನೀ ಹಾಡನ್ನು ಕಿನ್ನಲ್ ರಾಜ್ ಬರೆದಿದ್ದಾರೆ. ರವಿ ಬಸ್ರೂರು ಸಂಗೀತದ ಹಾಡನ್ನು ಸುಚೇತಾ ಬಸ್ರೂರು ಹಾಡಿದ್ದಾರೆ. ಹಿಂದಿ ಭಾಷೆಯ ‘ಫಲಕ್ ತು’ ಹಾಡನ್ನು ಕುಡಾ ಸುಚೇತಾ ಬಸ್ರೂರು ಹಾಡಿದ್ದು, ತಮಿಳು ಭಾಷೆಯಲ್ಲಿನ ಹಾಡನ್ನು ಅನನ್ಯಾ ಭಟ್ ಹಾಡಿದ್ದಾರೆ. ತೆಲುಗು ಮತ್ತು ಮಲಯಾಳಂ ವರ್ಶನ್ ನಲ್ಲೂ ಈ ಹಾಡು ಬಿಡುಗಡೆಯಾಗಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ವಿಜಯ್ ಕಿರಗಂದೂರು ಅವರು ಹೊಂಬಾಳೆ ಫಿಲಂಸ್ ಬ್ಯಾನರ್ ನಲ್ಲಿ ನಿರ್ಮಿಸಿರುವ ‘ಕೆಜಿಎಫ್ ಚಾಪ್ಟರ್ 2’ ಚಿತ್ರವು ಏಪ್ರಿಲ್ 14ರಂದು ಬಿಡುಗಡೆಯಾಗಲಿದೆ. ರಾಕಿಂಗ್ ಸ್ಟಾರ್ ಯಶ್, ಶ್ರೀನಿಧಿ ಶೆಟ್ಟಿ, ಸಂಜಯ್ ದತ್, ರವೀನಾ ಟಂಡನ್, ಪ್ರಕಾಶ್ ರೈ ಮುಂತಾದವರು ಚಿತ್ರದ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

Swathi MG

Recent Posts

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

7 mins ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

29 mins ago

ನಂಜನಗೂಡು ತಾಲ್ಲೂಕಿಗೆ ಶೇ.86.74 ರಷ್ಟು ಫಲಿತಾಂಶ: ವಿದ್ಯಾರ್ಥಿನಿ ಬಾಂಧವ್ಯ ತಾಲೂಕಿಗೆ ಪ್ರಥಮ ‌

ತಾಲ್ಲೂಕಿಗೆ ಶೇ.86.74 ರಷ್ಟು ಫಲಿತಾಂಶ ಬಂದಿದ್ದು, ನಂಜನಗೂಡಿನ ಸರ್ಕಾರಿ ಆದರ್ಶ ಶಾಲೆಯ ವಿದ್ಯಾರ್ಥಿನಿ ಬಾಂಧವ್ಯ ತಾಲ್ಲೂಕಿಗೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ…

46 mins ago

ಲೋಕಸಭೆ ಚುನಾವಣೆ: ಭಾಲ್ಕಿ ಕ್ಷೇತ್ರದಲ್ಲಿ ಅತ್ಯಧಿಕ ಮತದಾನ

ಬೀದರ್‌ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು ಶೇ 65.45ರಷ್ಟು ಮತದಾನ ದಾಖಲಾಗಿದ್ದು, ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಭಾಲ್ಕಿಯಲ್ಲಿ ಅತಿ ಹೆಚ್ಚು…

1 hour ago

ಕುಡಿಯುವ ನೀರಿನ ಸಮಸ್ಯೆ ನಿವಾರಣೆ: ಮಲಪ್ರಭಾ ಕಾಲುವೆಗೆ ಮೇ 14 ರಿಂದ 23 ರವರೆಗೆ ನೀರು

ಮೇ 14 ರಿಂದ 23 ರವರೆಗೆ ನವಿಲುತೀರ್ಥ ಜಲಾಶಯದಿಂದ ಮಲಪ್ರಭಾ ಹಾಗೂ ನರಗುಂದ ಶಾಖಾ ಕಾಲುವೆ ಮೂಲಕ ನವಲಗುಂದ ಅಣ್ಣಿಗೇರಿ,…

2 hours ago

ಬಿಜೆಪಿ ಸಾಮಾಜಿಕ ಜಾಲತಾಣ ಸಂಚಾಲಕ ಪ್ರಶಾಂತ್‌ ಮಾಕನೂರು ಬಂಧನ

ಎಸ್‌ಸಿ, ಎಸ್‌ಟಿ ಅನುದಾನ ಮುಸ್ಲಿಂ ಪಾಲಾಗುತ್ತಿದೆ ಎಂದು ಬಿಜೆಪಿ ತನ್ನ ಎಕ್ಸ್‌ ಖಾತೆಯನ್ನು ವಿಡಿಯೋ ಜಾಹೀರಾತು ಪ್ರಕಟಿಸಿತ್ತು. ಈ ವಿಡಿಯೋ…

2 hours ago