ಸಾಂಡಲ್ ವುಡ್

7 ಭಾಷೆಗಳಿಗೆ ಡಬ್ ಆಗಲಿದೆ ಉಪೇಂದ್ರ ಹಾಗೂ ಕಿಚ್ಚ ಸುದೀಪ್‌ ಅಭಿನಯದ ಕಬ್ಜಾ ಚಿತ್ರ!

ಸಾಂಡಲ್ ವುಡ್:  ಭಾರೀ ಕುತೂಹಲ ಮೂಡಿಸಿರುವ ಉಪೇಂದ್ರ ಹಾಗೂ ಕಿಚ್ಚ ಸುದೀಪ್‌ ಅಭಿನಯದ ಕಬ್ಜಾ ಚಿತ್ರದ ಚಿತ್ರೀಕರನ ಸಂಪೂರ್ಣ ಮುಕ್ತಾಯಗೊಂಡಿದ್ದು, ಚಿತ್ರತಂಡ ದೊಡ್ಡ ಘೋಷಣೆಯೊಂದನ್ನು ಮಾಡಿದೆ.

ಸದ್ಯ ಚಿತ್ರದ ಡಬ್ಬಿಂಗ್ ಮತ್ತು ಪೋಸ್ಟ್-ಪ್ರೊಡಕ್ಷನ್ ಕೆಲಸಗಳು ಪ್ರಗತಿಯಲ್ಲಿದ್ದು, ಚಿತ್ರವು 7 ಭಾಷೆಗಳಿಗೆ ಡಬ್ ಆಗಲಿದೆ. ಏಳು ಭಾಷೆಗಳಲ್ಲಿ ಡಬ್ಬಿಂಗ್ ಪ್ರಕ್ರಿಯೆ ಸಹ ಪ್ರಾರಂಭಗೊಂಡಿದೆ.

ಕಬ್ಜಾ 7 ಭಾಷೆಗಳಲ್ಲಿ ಡಬ್ ಆದ ಮೊದಲ ಕನ್ನಡ ಚಿತ್ರ. ಕನ್ನಡ, ಹಿಂದಿ, ತೆಲುಗು, ತಮಿಳು, ಮಲಯಾಳಂ, ಮರಾಠಿ ಮತ್ತು ಬೆಂಗಾಲಿ ಭಾಷೆಗಳಲ್ಲಿ ಚಿತ್ರ ಬಿಡುಗಡೆಯಾಗಲಿದೆ.

ಆರ್ ಚಂದ್ರು ನಿರ್ದೇಶನದ ಈ ಚಿತ್ರವು ಮಾಸ್ ಆಕ್ಷನ್ ಎಂಟರ್‌ಟೈನರ್ ಆಗಿದೆ. ಚಿತ್ರದಲ್ಲಿ ಉಪೇಂದ್ರ ಮತ್ತು ಸುದೀಪ್ ಮುಖ್ಯ ಭೂಮಿಕೆಯಲ್ಲಿದ್ದರೆ, ಶ್ರಿಯಾ ಸರನ್ ನಾಯಕಿಯಾಗಿ ನಟಿಸಿದ್ದಾರೆ. ಚಿತ್ರಕ್ಕೆ ರವಿ ಬಸ್ರೂರು ಸಂಗೀತ ಸಂಯೋಜಿಸಿದ್ದಾರೆ.

ಚಿತ್ರವು 1947 ರ ಗಾಂಧಿ ಅನುಯಾಯಿ ಮತ್ತು ಸ್ವಾತಂತ್ರ್ಯ ಹೋರಾಟಗಾರರ ಸುತ್ತ ಸುತ್ತುತ್ತದೆ. 1947 ರಿಂದ 1984 ರ ನಡುವಿನ ಕಥೆಯನ್ನು ಹೇಳಲಾಗಿದೆ.

ಈ ನಡುವೆ ಅಭಿಮಾನಿಗಳು ಚಿತ್ರದ ಟೀಸರ್ ಗಾಗಿ ಕಾಯುತ್ತಿದ್ದಾರೆ. ಸದ್ಯದಲ್ಲೇ ಟೀಸರ್ ಬಿಡುಗಡೆ ಮಾಡುವುದಾಗಿ ಚಂದ್ರು ಹೇಳಿದ್ದಾರೆ.

ಇನ್ನು ಈ ಬಗ್ಗೆ ಮಾತನಾಡಿದ ನಿರ್ದೇಶಕರು, ನಮ್ಮ ಕನ್ನಡ ಇಂಡಸ್ಟ್ರಿ ದೊಡ್ಡ ಮಟ್ಟದಲ್ಲಿ ಬೆಳೆದಿದೆ. ಹೀಗಾಗಿ ಪ್ರೇಕ್ಷಕರ ನಿರೀಕ್ಷೆಗೆ ತಕ್ಕಂತೆ ಚಿತ್ರದ ಟೀಸರ್ ಬಿಡುಗಡೆ ಮಾಡಬೇಕಿದೆ. ಚಿತ್ರದ ಡಬ್ಬಿಂಗ್ ಈಗಷ್ಟೇ ಆರಂಭವಾಗಿದ್ದು, ಡಬ್ಬಿಂಗ್ ಮುಗಿದ ನಂತರ ಟೀಸರ್ ಬಿಡುಗಡೆ ಮಾಡುತ್ತೇವೆ” ಎಂದು ಹೇಳಿದ್ದಾರೆ

Sneha Gowda

Recent Posts

ಎವರೆಸ್ಟ್​, ಎಂಡಿಎಚ್​ ಮಸಾಲೆಗಳ ಮಾರಾಟ ನಿಷೇಧ !

ಭಾರತದ ಎಂಡಿಎಚ್​ ಹಾಗೂ ಎವರೆಸ್ಟ್​ ಮಸಾಲೆ ಉತ್ಪನ್ನಗಳಲ್ಲಿ ವಿಷಕಾರಿ ಅಂಶ ಇರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ನೇಪಾಳವು…

48 mins ago

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯ ಅಬ್ಬರ

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ,…

1 hour ago

ಮನೆಗೆ ನುಗ್ಗಿ ಅಂಜಲಿ ಕೊಲೆ ಮಾಡಿದ್ದ ಆರೋಪಿ ಅರೆಸ್ಟ್

ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ನನ್ನು ಪೊಲೀಸರು ಬಂಧಿಸಿದ್ದಾರೆ.…

2 hours ago

ಚಿತ್ರದುರ್ಗ: ಮನೆಯೊಂದರಲ್ಲಿ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

ನಗರದ ಜೈಲು ರಸ್ತೆಯ ಮನೆಯೊಂದರಲ್ಲಿ ಪತ್ತೆಯಾಗಿದ್ದ ಐದು ಅಸ್ಥಿಪಂಜರಗಳಿಗೆ ಸಂಬಂಧಿಸಿದ ಎಫ್‌ಎಸ್‌ಎಲ್‌ ಅಂತಿಮ ವರದಿ ಪೊಲೀಸರ ಕೈ ಸೇರಿದ್ದು, ಸಾವಿಗೆ…

2 hours ago

ಬಿರುಗಾಳಿ ಸಹಿತ ಮಳೆಗೆ ಕುಸಿದ ಮಹಾದ್ವಾರ

ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವ ಮಹಾದ್ವಾರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ…

2 hours ago

ಮತ್ತೆ ಭರ್ಜರಿ ಏರಿಕೆ ಕಂಡ ‌ಚಿನ್ನದ ಬೆಲೆ !

ಜಾಗತಿಕವಾಗಿ ಚಿನ್ನಕ್ಕೆ ಈಗ ಸಖತ್ ಬೇಡಿಕೆ ಸೃಷ್ಟಿಯಾಗಿರುವುದು ಈ ಬೆಲೆ ಹೆಚ್ಚಳಕ್ಕೆ ಕಾರಣವಾಗಿದೆ. ಕಳೆದ ಒಂದು ತಿಂಗಳಿನಿಂದ ಚಿನ್ನದ ಬೆಲೆ…

2 hours ago