News Karnataka Kannada
Sunday, April 28 2024
ಸಾಂಡಲ್ ವುಡ್

ರಶ್ಮಿಕಾ ಮಂದಣ್ಣ ಡೀಪ್​ ಫೇಕ್​ ವಿಡಿಯೋ ಶೇರ್​ ಮಾಡಿದ್ದ ಆರೋಪಿ ಅರೆಸ್ಟ್

ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್‌ ಫೇಕ್‌ ವಿಡಿಯೋ ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗಿತ್ತು. ಕೊನೆಗೂ ಈ ಪ್ರಕರಣವನ್ನು ದೆಹಲಿ ಪೊಲೀಸರು ಬೇಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
Photo Credit : News Kannada

ಬೆಂಗಳೂರು: ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್‌ ಫೇಕ್‌ ವಿಡಿಯೋ ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗಿತ್ತು. ಕೊನೆಗೂ ಈ ಪ್ರಕರಣವನ್ನು ದೆಹಲಿ ಪೊಲೀಸರು ಬೇಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ದೆಹಲಿ ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ, ಇಮಾನಿ ನವೀನ್ (24) ಬಂಧಿತ ಆರೋಪಿ.

ಈ ವಿಚಾರಕ್ಕೆ ಸಂಬಂಧಿಸಿದಂತೆ ಟ್ವಿಟ್​ ಮಾಡುವ ಮೂಲಕ ಪ್ರತಿಕ್ರಿಯೆ ನೀಡಿದ ನಟಿ ರಶ್ಮಿಕಾ ಮಂದಣ್ಣ “ದೆಹಲಿ ಪೊಲೀಸರಿಗೆ ನನ್ನ ಹೃತ್ಪೂರ್ವಕ ಧನ್ಯವಾದಗಳನ್ನು ತಿಳಿಸುತ್ತೇನೆ. ಕೃತ್ಯ ಎಸಗಿದವರನ್ನು ಬಂಧಿಸಿದ್ದಕ್ಕಾಗಿ ಧನ್ಯವಾದಗಳು. ಹುಡುಗರೇ- ನಿಮ್ಮ ಒಪ್ಪಿಗೆಯಿಲ್ಲದೇ ನಿಮ್ಮ ಚಿತ್ರವನ್ನು ಎಲ್ಲಿಯಾದರೂ ಬಳಸಿದರೆ ಅಥವಾ ಮಾರ್ಫ್ ಮಾಡಿದ್ದರೆ ಅದು ತಪ್ಪು. ನಿಮ್ಮನ್ನು ಬೆಂಬಲಿಸುವ ಜನರಿಂದ ನೀವು ಸುತ್ತುವರೆದಿರುವಿರಿ. ಹೀಗೆ ಮಾಡಿದ್ರೆ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂಬುದನ್ನು ಇದು ನೆನಪಿಸುತ್ತದೆ ಎಂದು ನಾನು ಭಾವಿಸುತ್ತೇನೆ” ಎಂದು ಬರೆದುಕೊಂಡಿದ್ದಾರೆ.

ಸದ್ಯ ದೆಹಲಿ ಪೊಲೀಸರು ಆಂಧ್ರಪ್ರದೇಶದಲ್ಲಿ ಆರೋಪಿಯನ್ನು ಬಂಧಿಸಿದ್ದು, ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

ಬಂಧಿತ ಆರೋಪಿಯೂ ರಶ್ಮಿಕಾ ಮಂದಣ್ಣ ಫ್ಯಾನ್ ಪೇಜ್ ಅಡ್ಮಿನ್ ಆಗಿದ್ದನಂತೆ. ಇನ್ಸ್‌ಸ್ಟಾಗ್ರಾಂ ಖಾತೆಯಲ್ಲಿ ಫಾಲೋವರ್ಸ್ ಸಂಖ್ಯೆ ಹೆಚ್ಚಿಸಿಕೊಳ್ಳಲು ಡೀಪ್ ಫೇಕ್ ವಿಡಿಯೋ ಸೃಷ್ಟಿ ಮಾಡಿದ್ದಾನಂತೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು