ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಬ್ಯಾಂಕ್ ಜನಾರ್ಧನ್ಗೆ ಹೃದಯಾಘಾತವಾಗಿದೆ. ಮಣಿಪಾಲ್ ಆಸ್ಪತ್ರೆಯಲ್ಲಿ ಬ್ಯಾಂಕ್ ಜನಾರ್ಧನ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಬ್ಯಾಂಕ್ ಜನಾರ್ಧನ್ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರೆದಿದೆ.
ಬ್ಯಾಂಕ್ ಜನಾರ್ದನ್ ರಂಗಭೂಮಿ ಕಲಾವಿದರಾಗಿ ಹೆಸರು ಮಾಡಿದ್ದರು. ಬಳಿಕ ಹಲವು ಕನ್ನಡ ಚಲನಚಿತ್ರಗಳು ಮತ್ತು ಟಿವಿ ಸೀರಿಯಲ್ನಲ್ಲಿ ಹಾಸ್ಯ ನಟನಾಗಿ ನಟಿಸಿ ಜನಪ್ರಿಯರಾಗಿದ್ದಾರೆ.
ಕಳೆದ ದಿನ ಸಂಜೆ ಬ್ಯಾಂಕ್ ಜನಾರ್ಧನ್ ಅವರಿಗೆ ಹೃದಯಾಘಾತ ಉಂಟಾಗಿದೆ. ಸದ್ಯ ನಟ ಬ್ಯಾಂಕ್ ಜನಾರ್ದನ್ ಅವರಿಗೆ ಐಸಿಯೂನಲ್ಲಿ ಚಿಕಿತ್ಸೆ ನೀಡಲಾಗ್ತಿದೆ ಎಂದು ವರದಿಯಾಗಿದೆ.