News Karnataka Kannada
Saturday, May 11 2024
ಸಾಂಡಲ್ ವುಡ್

ನಟಿ ಲೀಲಾವತಿ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ದರ್ಶನ್

Darshan Mt Lila
Photo Credit : News Kannada

ಬೆಂಗಳೂರು: ಹಿರಿಯ ನಟಿ ಲೀಲಾವತಿ ಅವರ ಮನೆಗೆ ಇಂದು (ನ.26) ಚಾಲೆಂಜಿಂಗ್ ಸ್ಟಾರ್ ದರ್ಶನ್ ಭೇಟಿ ನೀಡಿದ್ದಾರೆ. ನಟಿ ಲೀಲಾವತಿ ಅವರನ್ನ ದರ್ಶನ್ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ. ವಯಸ್ಸಿನ ಕಾರಣದಿಂದ ಹಾಸಿಗೆ ಹಿಡಿದಿರುವ ಲೀಲಾವತಿ ಮನೆಗೆ ನಟ ದರ್ಶನ್ ಭೇಟಿ ನೀಡಿ ವಿನೋದ್ ರಾಜ್ ಬಳಿ ಯೋಗಕ್ಷೇಮ ವಿಚಾರಿಸಿದ್ದಾರೆ.

ಕೆಲ ಹೊತ್ತು ಲೀಲಾವತಿ ಅವರ ಮನೆಯಲ್ಲಿದ್ದು ವಿನೋದ್ ರಾಜ್ ಬಳಿ ಸಾಕಷ್ಟು ವಿಚಾರಗಳ ಬಗ್ಗೆ ದರ್ಶನ್ ಮಾತನಾಡಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಅನೇಕ ಕಲಾವಿದರು ಮತ್ತು ತಂತ್ರಜ್ಞರು ಸೋಲದೇವನಹಳ್ಳಿಗೆ ತೆರಳಿ ಆರೋಗ್ಯ ವಿಚಾರಿಸುತ್ತಿದ್ದಾರೆ. ಅರ್ಜುನ್ ಸರ್ಜಾ ಕೂಡ ಇತ್ತೀಚೆಗೆ ಅದೇ ಕೆಲಸ ಮಾಡಿದ್ದರು. 87 ವರ್ಷದ ಹಿರಿಯ ನಟಿ ಲೀಲಾವತಿಯವರು ಆರೋಗ್ಯ ಸಮಸ್ಯೆಯಿಂದ ವಿಶ್ರಾಂತಿ ಪಡೆಯುತ್ತಿದ್ದಾರೆ. ಇನ್ನು ಇಂದು ಮೃತ್ಯುಂಜಯಹೋಮ ನಡೆದಿದ್ದು, ಜೊತೆಗೆ  ಲೀಲಾವತಿ ಕನಸಿನ ಪಶು ಆಸ್ಪತ್ರೆ ಉದ್ಘಾಟನೆ ಆಗಿದೆ. ಸರಳವಾಗಿ ಈ ಸಮಾರಂಭ ಜರುಗಿದೆ.

 

 

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು