ಸ್ಯಾಂಡಲ್ ವುಡ್ ನ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ಧನುಷ್ ಜೊತೆ ಕ್ಯಾಪ್ಟನ್ ಮಿಲ್ಲರ್ ಚಿತ್ರದಲ್ಲಿ ನಟಿಸಲಿದ್ದು, ಈ ಸಿನಿಮಾದ ಹಾಡು ಬಿಡುಗಡೆ ಸಮಾರಂಭ ಚೆನ್ನೈನಲ್ಲಿ ನಡೆದಿದೆ. ಈ ವೇಳೆ ಧನುಷ್ ಶಿವರಾಜ್ ಕುಮಾರ್ ಅವರನ್ನು ಹಾಡಿಹೊಗಳಿದ್ದಾರೆ.
ಧನುಷ್ ಹಾಗೂ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಟನೆಯ ಕ್ಯಾಪ್ಟನ್ ಮಿಲ್ಲರ್ ಸಿನಿಮಾ ಫಸ್ಟ್ ಲುಕ್ ಹಾಗೂ ಟೀಸರ್ ಮೂಲಕ ಬಹಳ ಸದ್ದು ಮಾಡ್ತಿದೆ. ಕ್ಯಾಪ್ಟನ್ ಮಿಲ್ಲರ್ ಸಿನಿಮಾದ ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ಪೊಂಗಲ್ ಹಬ್ಬದ ಸ್ಪೆಷಲ್ ಆಗಿ ಧನುಷ್-ಶಿವಣ್ಣ ಸಿನಿಮಾ ತೆರೆಗೆ ಬರಲಿದೆ. 2024, ಜನವರಿ 12ರಂದು ‘ಕ್ಯಾಪ್ಟನ್ ಮಿಲ್ಲರ್’ ವಿಶ್ವದಾದ್ಯಂತ ತೆರೆ ಕಾಣಲಿದೆ. ಈ ಚಿತ್ರವನ್ನು ಅರುಣ್ ಮಾಥೇಶ್ವರನ್ ನಿರ್ದೇಶಿಸಿದ್ದಾರೆ. ಧನುಷ್ ಜೋಡಿಯಾಗಿ ಪ್ರಿಯಾಂಕಾ ಮೋಹನನ್ ನಟಿಸಿದ್ದಾರೆ.
ಸದ್ಯ ಈ ಸಿನಿಮಾಗೆ ಯು/ಎ ಸರ್ಟಿಫಿಕೇಟ್ ಸಿಕ್ಕಿದ್ದು, ಜಿವಿ ಪ್ರಕಾಶ್ ಈ ಸಿನಿಮಾಗೆ ಹಿನ್ನೆಲೆ ಸಂಗೀತ ಹಾಗೂ ಟ್ಯೂನ್ಗಳನ್ನು ಕಂಪೋಸ್ ಮಾಡಿದ್ದಾರೆ.