ಬೆಂಗಳೂರು: ನಟ ಧ್ರುವ ಸರ್ಜಾ ಹುಟ್ಟು ಹಬ್ಬಕ್ಕಾಗಿ ‘ಕೆಡಿ’ ಸಿನಿಮಾ ತಂಡ ಚಿತ್ರದ ಪೋಸ್ಟರ್ ರಿಲೀಸ್ ಮಾಡುವ ಮೂಲಕ ಶುಭಾಶಯ ತಿಳಿಸಿದೆ. ಪ್ರೇಮ್ ಮತ್ತು ಧ್ರುವ ಸರ್ಜಾ ಕಾಂಬಿನೇಷನ್ ನ ಸಿನಿಮಾ ಇದಾಗಿದ್ದು, ಈ ಸಿನಿಮಾದಲ್ಲಿ ಧ್ರುವ ಹೊಸ ರೀತಿಯ ಪಾತ್ರವನ್ನು ಮಾಡಿದ್ದಾರೆ.
ಕೆವಿಎನ್ ನಿರ್ಮಾಣದ ಧ್ರುವ ಸರ್ಜಾ ಮತ್ತು ನಿರ್ದೇಶಕ ಪ್ರೇಮ್ ಕಾಂಬಿನೇಷನ್ ಸಿನಿಮಾ ನಾನಾ ಕಾರಣಗಳಿಂದಾಗಿ ಸಖತ್ ಸದ್ದು ಮಾಡ್ತಿದೆ. ಚಿತ್ರದ ಟೈಟಲ್ ಮೂಲಕ ಕ್ಯೂರಿಯಸ್ ಹುಟ್ಟು ಹಾಕಿರುವ ಈ ಸಿನಿಮಾ ಬಗ್ಗೆ ಫ್ಯಾನ್ಸ್ ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಸಂಜಯ್ ದತ್, ಶಿಲ್ಪಾ ಶೆಟ್ಟಿ ಈ ಸಿನಿಮಾಗೆ ಎಂಟ್ರಿ ಕೊಟ್ಟಿದ್ದಾರೆ. ಜೊತೆಗೆ ರವಿಚಂದ್ರನ್ ಕೂಡ ಇದ್ದಾರೆ.
ಮೊನ್ನೆಯಷ್ಟೇ ರವಿಚಂದ್ರನ್ ಅವರ `ಕೆಡಿ’ ಸಿನಿಮಾದಲ್ಲಿನ ಫಸ್ಟ್ ಲುಕ್ ಬಿಡುಗಡೆಯಾಗಿ ಮೆಚ್ಚುಗೆ ಗಳಿಸಿತ್ತು. ಇದರ ಜೊತೆಗೆ ಇಂದು ಅಣ್ಣ ಚಿರು ಅವರ ಕೊನೆಯ ಸಿನಿಮಾ ರಾಜಮಾರ್ತಾಂಡ ಕೂಡ ರಿಲೀಸ್ ಆಗ್ತಾ ಇದ್ದು, ಧ್ರುವ ಅವರು ಅಭಿಮಾನಿಗಳ ಜತೆ ಚಿತ್ರ ವೀಕ್ಷಿಸಲಿದ್ದಾರೆ.