ಅಪಘಾತ ಪ್ರಕರಣ: ನಟ ನಾಗಭೂಷಣ್​ಗೆ ಹೆಚ್ಚಿದ ಸಂಕಷ್ಟ

ಚಿತ್ರರಂಗದಲ್ಲಿ ಈಗತಾನೇ ಹೆಸರು ಮಾಡುತ್ತಿರುವ ನಾಗಭೂಷಣ್ ಅವರು ಅಪಘಾತ ಪ್ರಕರಣ ಒಂದರಲ್ಲಿ ತೊಂದರೆಗೆ ಸಿಲುಕಿದ್ದರು. ಇದೀಗ ಈ ಪ್ರಕರಣದಲ್ಲಿ ಅವರಿಗೆ ಹಿನ್ನಡೆ ಆಗಿದೆ. ನಾಗಭೂಷಣ್ ವಿರುದ್ಧ ನ್ಯಾಯಾಲಯಕ್ಕೆ 80 ಪುಟಗಳ ಚಾರ್ಜ್​ಶೀಟ್ ಸಲ್ಲಿಕೆ ಮಾಡಲಾಗಿದೆ. ಸದ್ಯ 60 ಸಾಕ್ಷಿಗಳನ್ನು ಪೊಲೀಸರು ಕಲೆಹಾಕಿದ್ದಾರೆ. ಇದರ ಜೊತೆಗೆ ಸಿಸಿಟಿವಿ ಮಾತ್ರವಲ್ಲದೆ ಪ್ರತ್ಯಕ್ಷದರ್ಶಿಗಳ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿದೆ. ಇದರಿಂದ ನಾಗಭೂಷಣ್ ಅವರಿಗೆ ಸಂಕಷ್ಟ ಮತ್ತಷ್ಟು ಹೆಚ್ಚಲಿದೆ.

ಬೆಂಗಳೂರಿನ ಕೋಣನ ಕುಂಟೆ ಸಮೀಪ ಅಪಘಾತ ಸಂಭವಿಸಿತ್ತು. ನಾಗಭೂಷಣ್ ಓಡಿಸುತ್ತಿದ್ದ ಕಾರು ಪಾದಚಾರಿಗಳಿಗೆ ಡಿಕ್ಕಿ ಹೊಡೆದ ಬಳಿಕ ವಿದ್ಯುತ್ ಕಂಬಕ್ಕೆ ಗುದ್ದಿತ್ತು. ಈ ವೇಳೆ ಪ್ರೇಮಾ ಎಂಬುವವರು ಮೃತಪಟ್ಟರೆ, ಅವರ ಪತಿ ಕೃಷ್ಣ ಅವರಿಗೆ ಗಂಭೀರ ಗಾಯವಾಗಿತ್ತು. ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಈಗ ಚೇತರಿಕೆ ಕಂಡಿದ್ದು, ಅವರು ಹೇಳಿಕೆ ದಾಖಲು ಮಾಡಿದ್ದಾರೆ.

ಈ ದಂಪತಿಗಳು ಪಾದಾಚಾರಿ ಮಾರ್ಗದಿಂದ ನೇರ ರಸ್ತೆಗೆ ಇಳಿದಿದ್ದರು ಎಂದು ಹೇಳಿಕೆ ನೀಡಿದ್ದರು. ಏಕಾಏಕಿ ಕಾರಿಗೆ ಅಡ್ಡಲಾಗಿ ಬಂದ ಕಾರಣ ಕಾರ್ ಕಂಟ್ರೋಲ್ ಸಿಗದೆ ಆಯಕ್ಸಿಡೆಂಟ್ ಆಗಿದೆ ಎಂದು ನಾಗಭೂಷಣ್ ಹೇಳಿಕೆ ನೀಡಿದ್ದರು. ಆದರೆ, ಕೃಷ್ಣ ಅವರ ಹೇಳಿಕೆಯಲ್ಲಿ ಬೇರೆಯೇ ಉಲ್ಲೇಖಿಸಿದ್ದಾರೆ.

Gayathri SG

Recent Posts

ಯುಎಇ ರಾಯಲ್‌ ಮನೆತನದ ಸದಸ್ಯನ ನಿಗೂಢ ಸಾವು

ಯುನೈಟೆಡ್ ಅರಬ್ ಎಮಿರೇಟ್ಸ್‌ನ  ರಾಯಲ್ ಮನೆತನದ ಸದಸ್ಯ ಶೇಖ್ ಹಝಾ ಬಿನ್ ಸುಲ್ತಾನ್ ಬಿನ್ ಜಾಯೆದ್ ಅಲ್ ನಹ್ಯಾನ್ ನಿಗೂಢವಾಗಿ…

60 mins ago

ಬಸವ ಜಯತಿಯ ಅಂಗವಾಗಿ ಆದಿವಾಸಿ ಮಕ್ಕಳಿಗೆ ಹಣ್ಣು-ಹಂಪಲು ವಿತರಣೆ

ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…

1 hour ago

ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥ

ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ‌ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ  ನಡೆದಿದೆ.

2 hours ago

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

3 hours ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

3 hours ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

4 hours ago