ಟಾಲಿವುಡ್: ಖ್ಯಾತ ನಟ ವಿಜಯ್ ದೇವರಕೊಂಡ ಇಂದು ಬೆಂಗಳೂರಿಗೆ ಆಗಮಿಸಿದ್ದಾರೆ. ಬಹುನಿರೀಕ್ಷಿತ ‘ಲೈಗರ್’ ಸಿನಿಮಾದ ಪ್ರಚಾರದ ಸಲುವಾಗಿ ಅವರು ಬಂದಿದ್ದಾರೆ. ಈ ವೇಳೆ ಅವರು ಪುನೀತ್ ರಾಜ್ಕುಮಾರ್ ಸಮಾಧಿಗೆ ಭೇಟಿ ನೀಡಿದ್ದಾರೆ.
‘ಲೈಗರ್’ ಸಿನಿಮಾ ಆಗಸ್ಟ್ 25ರಂದು ಅದ್ದೂರಿಯಾಗಿ ತೆರೆಗೆ ಬರಲಿದೆ. ಖ್ಯಾತ ನಿರ್ದೇಶಕ ಪುರಿ ಜಗನ್ನಾಥ್ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ.
ಪುನೀತ್ ರಾಜ್ಕುಮಾರ್ ಅವರು ಮೊದಲ ಬಾರಿ ಹೀರೋ ಆಗಿ ನಟಿಸಿದ ‘ಅಪ್ಪು’ ಚಿತ್ರಕ್ಕೆ ಆ್ಯಕ್ಷನ್-ಕಟ್ ಹೇಳಿದ್ದು ಕೂಡ ಪುರಿ ಜಗನ್ನಾಥ್. ಅವರಿಗೆ ಡಾ. ರಾಜ್ಕುಮಾರ್ ಕುಟುಂಬದ ಜೊತೆಗೆ ಒಡನಾಟ ಇದೆ. ಈಗ ಅವರು ನಿರ್ದೇಶನ ಮಾಡಿರುವ ‘ಲೈಗರ್’ ಚಿತ್ರದ ಬಗ್ಗೆ ಬೆಂಗಳೂರಿನಲ್ಲಿ ಪ್ರಚಾರ ಮಾಡಲಾಗುತ್ತಿದೆ.
ಬಹುಕೋಟಿ ರೂಪಾಯಿ ಬಜೆಟ್ನಲ್ಲಿ ಮೂಡಿಬಂದಿರುವ ‘ಲೈಗರ್’ ಚಿತ್ರದಲ್ಲಿ ವಿಜಯ್ ದೇವರಕೊಂಡ ಅವರಿಗೆ ಜೋಡಿಯಾಗಿ ಅನನ್ಯಾ ಪಾಂಡೆ ನಟಿಸಿದ್ದಾರೆ.
ಬಾಕ್ಸರ್ ಪಾತ್ರದಲ್ಲಿ ವಿಜಯ್ ದೇವರಕೊಂಡ ಕಾಣಿಸಿಕೊಳ್ಳುತ್ತಿರುವುದು ವಿಶೇಷ. ಅವರ ತಾಯಿ ಪಾತ್ರಕ್ಕೆ ರಮ್ಯಾ ಕೃಷ್ಣ ಬಣ್ಣ ಹಚ್ಚಿದ್ದಾರೆ.