ಬೆಂಗಳೂರು: ಸ್ಯಾಂಡಲ್ವುಡ್ ನಟಿ ಅದಿತಿ ಪ್ರಭುದೇವ ಹೊಸ ವರ್ಷಕ್ಕೆ ಹೊಸ ಸುದ್ದಿಯನ್ನು ಹಂಚಿಕೊಂಡಿದ್ದಾರೆ. 2024ರ ಮೊದಲ ದಿನ ತಾಯಿಯಾಗುತ್ತಿದ್ದೇನೆ ಎಂದು ಹೇಳುವ ಮೂಲಕ ಫ್ಯಾನ್ಸ್ ಜೊತೆ ಗುಡ್ ನ್ಯೂಸ್ ಹಂಚಿಕೊಂಡಿದ್ದಾರೆ.
ದಾವಣಗೆರೆ ಮೂಲದ ನಟಿ ಅದಿತಿ ಪ್ರಭುದೇವ ಅವರು 2022ರಲ್ಲಿ ಉದ್ಯಮಿ ಯಶಸ್ಸು ಚಂದ್ರಕಾಂತ್ ಪಟ್ಲಾ ಅವರನ್ನು ವಿವಾಹವಾದರು. ಆದರೀಗ ಈ ಜೋಡಿ ತಂದೆ-ತಾಯಿಯಾಗುವ ಸಂತಸದಲ್ಲಿದ್ದಾರೆ.
ಸದ್ಯ ಇಬ್ಬರು ಫೋಟೋಶೂಟ್ ಮಾಡಿಸಿಕೊಂಡಿದ್ದು, ನಟಿ ಅದಿತಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ತಾಯಿಯಾಗುತ್ತಿರುವ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಜೊತೆಗೆ ಹೊಸ ವರ್ಷಕ್ಕೆ ಶುಭಾಶಯ ತಿಳಿಸಿದ್ದಾರೆ.