ನಟ ಶಶಿಕುಮಾರ್ ಪುತ್ರ ಅಕ್ಷಿತ್ ಶಶಿಕುಮಾರ್ ಮತ್ತು ನಾಯಕಿಯಾಗಿ ಕೀರ್ತಿ ಕಲ್ಕೆರೆ ಅಭಿನಯಿಸಿರುವ “ಓ ಮೈ ಲವ್’ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದ್ದು ಜು.15ಕ್ಕೆ ರಿಲೀಸ್ ಆಗಲಿದೆ.
ಜಿಸಿಬಿ ಪ್ರೊಡಕ್ಷನ್ಸ್’ ಬ್ಯಾನರ್ನಲ್ಲಿ ಜಿ. ರಾಮಾಂಜಿನಿ ಕಥೆ ಬರೆದು, ಬಂಡವಾಳ ಹೂಡಿ ನಿರ್ಮಿಸುತ್ತಿರುವ “ಓ ಮೈ ಲವ್’ ಚಿತ್ರಕ್ಕೆ ಸ್ಮೈಲ್ ಶ್ರೀನು ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ.
ಇನ್ನು “ಓ ಮೈ ಲವ್’ ಸಿನಿಮಾದಲ್ಲಿ ಬಹುಭಾಷಾ ನಟ ದೇವಗಿಲ್ ಖಳನಟನಾಗಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ ಎಸ್. ನಾರಾಯಣ್, ದೇವಗಿಲ್, ಸಾಧುಕೋಕಿಲ, ಪವಿತ್ರಾ ಲೋಕೇಶ್ ಮೊದಲಾದವರು ಚಿತ್ರದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಚಿತ್ರಕ್ಕೆ ಹಾಲೇಶ್ ಎಸ್. ಛಾಯಾಗ್ರಹಣ, ಡಿ. ಮಲ್ಲಿ ಸಂಕಲನವಿದೆ.