ಕಿಚ್ಚ ಸುದೀಪ್ ಅವರ ಅಕ್ಕನ ಮಗ ಸಂಚಿತ್ ಸಂಜೀವ್ ಇಂದು ಅಧಿಕೃತವಾಗಿ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟಿದ್ದಾರೆ. ಸಂಚಿತ್ ಸಂಜೀವ ನಟಿಸಿ, ನಿರ್ದೇಶನ ಮಾಡಲಿರುವ ಚಿತ್ರಕ್ಕೆ ಇಂದು ಬೆಂಗಳೂರಿನ ಗವಿಪುರಂನ ಶ್ರೀ ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ಮುಹೂರ್ತ ನಡೆಯಿತು. ಈ ಕಾರ್ಯಕ್ರಮಕ್ಕೆ ಕಿಚ್ಚ ಸುದೀಪ್ ಅತಿಥಿಯಾಗಿ ಆಗಮಿಸಿದ್ದರು.
ಪ್ರಿಯಾ ಸುದೀಪ್, ಲಹರಿ ಸಂಸ್ಥೆ ಹಾಗೂ ಕೆ.ಪಿ.ಶ್ರೀಕಾಂತ್ ಜಂಟಿಯಾಗಿ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದು, ನಟನೆಯ ಜೊತೆ ಸಂಚಿತ್ ಆಕ್ಷನ್ ಕಟ್ ಹೇಳುತ್ತಿರುವುದು ವಿಶೇಷ
ಸಾಕಷ್ಟು ಸಮಯದಿಂದ ಸಂಚಿತ್ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಡುವ ಬಗ್ಗೆ ಮಾತುಗಳು ಕೇಳಿಬರುತ್ತಿತ್ತು. ಇದೀಗ ಅದು ನೆರವೇರಿದೆ. ಹಾಗಂತ ಸಂಚಿತ್ ದಿಢೀರ್ ಅಂತ ಸಿನಿಮಾ ರಂಗಕ್ಕೆ ಬರುತ್ತಿಲ್ಲ. ಈಗಾಗಲೇ ಕಿಚ್ಚನ ‘ಅಂಬಿ ನಿಂಗೆ ವಯಸ್ಸಾಯ್ತೋ’, ‘ವಿಕ್ರಾಂತ್ ರೋಣ’ ಸಿನಿಮಾಗಳಲ್ಲಿ ಕೆಲಸ ಮಾಡಿದ್ದಾರೆ. ಆದರೆ ಕ್ಯಾಮೆರಾ ಮುಂದೆ ಅಲ್ಲ ಹಿಂದೆ ಗುರುತಿಸಿಕೊಂಡಿದ್ದರು. ಜೊತೆಗೆ ಮುಂಬೈನಲ್ಲಿ ನಟನೆಯನ್ನು ಕೂಡ ಕಲಿತು ಬಂದಿದ್ದಾರೆ.