ನಟ ಪುನೀತ್ ರಾಜ್ಕುಮಾರ್ ಅವರ ಹುಟ್ಟುಹಬ್ಬಕ್ಕೆ ಪತ್ನಿ ಅಶ್ವಿನಿ ಪುನೀತ್ ರಾಜ್ಕುಮಾರ್ ಎಂದೆಂದಿಗೂ ನಮ್ಮ ಹೃದಯಲ್ಲಿ ಶಾಶ್ವತ ಎಂದು ಅಪ್ಪುಗೆ ಶುಭಹಾರೈಸಿದ್ದಾರೆ.
ಅಪ್ಪು ಕುರಿತು ಪತ್ನಿ ಅಶ್ವಿನಿ ಪುನೀತ್ ರಾಜ್ಕುಮಾರ್ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ ಅದರಲ್ಲಿ, ಅಪ್ಪು ಅವರು ತಮ್ಮ ಅಪ್ರತಿಮ ಪ್ರತಿಭೆ, ಕರುಣೆ ಮತ್ತು ಮಾನವೀಯತೆಯಿಂದ ನಮ್ಮ ಹೃದಯಾಂತರಾಳವನ್ನು ಬೆಳಗಿಸುತ್ತಲೇ ಇದ್ದಾರೆ. ಅಪ್ಪು ಅವರು ಮಾನವೀಯತೆಯಲ್ಲಿ ಇರಿಸಿದ್ದ ಅಚಲ ಬದ್ಧತೆ ಅವರ ಹಾದಿಯಲ್ಲಿ ನಡೆಯಲು ನಮಗೆ ಸದಾ ಸ್ಫೂರ್ತಿದಾಯಕವಾಗಿರುತ್ತದೆ ಎಂದು ಬರೆದುಕೊಂಡಿದ್ದಾರೆ.
ಅಪ್ಪು ಅವರ ಹುಟ್ಟುಹಬ್ಬದ ಸವಿನೆನಪಿನಲ್ಲಿ…
ಎಂದೆಂದಿಗೂ ನಮ್ಮ ಹೃದಯದಲ್ಲಿ. ✨
.
Fond birthday remembrance of Appu…
Forever in our hearts.#DrPuneethRajkumar #BirthAnniversary pic.twitter.com/diNWCzYzAq— Ashwini Puneeth Rajkumar (@Ashwini_PRK) March 17, 2024