ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಏಪ್ರಿಲ್ 19 ರಂದು ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮೊದಲು ಸಿಎಂ ಬೊಮ್ಮಾಯಿ ಶಿಗ್ಗಾವಿ ನಗರದಲ್ಲಿ ಬೃಹತ್ ರೋಡ್ ಶೋ ನಡೆಸಲಿದ್ದಾರೆ.
ಸಾವಿರಾರು ಬಿಜೆಪಿ ಕಾರ್ಯಕರ್ತರು ಈ ರೋಡ್ ಶೋನಲ್ಲಿ ಭಾಗಿಯಾಗಲಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಬೆಂಬಲ ಸೂಚಿಸಿರುವ ನಟ ಕಿಚ್ಚ ಸುದೀಪ್, ಇಂದು ಸಿಎಂ ಬೊಮ್ಮಾಯಿ ನಾಮಪತ್ರ ಸಲ್ಲಿಕೆ ವೇಳೆ ಹಾಜರಾಗಲಿದ್ದಾರೆ. ಶಿಗ್ಗಾವಿ ನಗರದಲ್ಲಿ ನಡೆಯಲಿರುವ ಬೊಮ್ಮಾಯಿ ಶಕ್ತಿ ಪ್ರದರ್ಶನ ಮೆರವಣಿಗೆಯಲ್ಲಿ ನಟ ಕಿಚ್ಚ ಸುದೀಪ್ ಭಾಗಿಯಾಗುವ ಸಾಧ್ಯತೆ ಇದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಕೂಡ ಮೆರವಣಿಗೆಯಲ್ಲಿ ಭಾಗಿಯಾಗಲಿದ್ದಾರೆ.