News Karnataka Kannada
Monday, April 29 2024
ಸಾಂಡಲ್ ವುಡ್

ಬೆಂಗಳೂರು: ಪುನೀತ್ ಗೆ ನ.1ರಂದು ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ

Actor Puneeth Rajkumar's memorial has been sanctioned Rs 6 crore to prevent a heart-related death. Grant
Photo Credit : Facebook

ಬೆಂಗಳೂರು: ಚಿತ್ರನಟ ಡಾ. ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿಯನ್ನು ನವೆಂಬರ್ 1 ರಂದು ಪ್ರದಾನ ಮಾಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ತೋಟಗಾರಿಕೆ ಇಲಾಖೆ ಮತ್ತು ಮೈಸೂರು ಉದ್ಯಾನ ಕಲಾ ಸಂಘದ ವತಿಯಿಂದ ಲಾಲ್‍ಬಾಗ್ ಗಾಜಿನ ಮನೆಯಲ್ಲಿ ಆಯೋಜಿಸಿರುವ ಫಲಪುಷ್ಪ ಪ್ರದರ್ಶನವನ್ನು ಉದ್ಘಾಟಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಪ್ರಶಸ್ತಿ ಕೊಡಮಾಡಲು ಸಿದ್ಧತೆಗಳನ್ನು ಕೈಗೊಳ್ಳಲು ಸಮಿತಿಯನ್ನು ರಚಿಸಲಾಗುವುದು. ರಾಜ್ ಕುಮಾರ್ ಅವರ ಕುಟುಂಬದ ಸದಸ್ಯರು ಸಹ ಸಮಿತಿಯಲ್ಲಿ ಇರುತ್ತಾರೆ. ಎಲ್ಲರೂ ಸೇರಿ ಗೌರವಯುತವಾಗಿ ಪುನೀತ್ ಅವರಿಗೆ ಮರಣೋತ್ತರವಾಗಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದರು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು