ಸಾಂಡಲ್ ವುಡ್

ವಿನು ಬಳಂಜ ನಿರ್ದೇಶನದ ‘ಬೇರ’ ಚಲನಚಿತ್ರ ಬಿಡುಗಡೆ

ಮ೦ಗಳೂರು: ಎಸ್ ಎಲ್ ವಿ ಪ್ರೊಡಕ್ಷನ್ ಹೌಸ್ ನಲ್ಲಿ ದಿವಾಕರ ದಾಸ್ ನಿರ್ಮಾಣ ವಿನು ಬಳಂಜ ನಿರ್ದೇಶನದಲ್ಲಿ ತಯಾರಾದ ವಿಭಿನ್ನ ಕಥಾವಸ್ತು ಒಳಗೊಂಡಿರುವ ‘ಬೇರ’ ಕನ್ನಡ ಚಲನಚಿತ್ರ ಭಾರತ್ ಮಾಲ್ ನ ಬಿಗ್ ಸಿನಿಮಾಸ್ ನಲ್ಲಿ ಶುಕ್ರವಾರ ಬೆಳಗ್ಗೆ ಬಿಡುಗಡೆ ಗೊಂಡಿತು. ಚಲನ ಚಿತ್ರ ನಿರ್ಮಾಪಕ,ನಿರ್ದೇಶಕ ಪ್ರಕಾಶ್ ಪಾಂಡೇಶ್ವರ್ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.

ಬಳಿಕ ಮಾತಾಡಿದ ಅವರು, “ಇಂದು ಕರ್ನಾಟಕ ರಾಜ್ಯದಾದ್ಯಂತ ಬೇರ ಚಿತ್ರ ಬಿಡುಗಡೆಯಾಗುತ್ತಿದೆ. ಚಿತ್ರದಲ್ಲಿ ಹಿಂದೂ ಮುಸ್ಲಿಮರ ಬಾಂಧವ್ಯದ ಕತೆ ಇರುವುದಾಗಿ ನಿರ್ದೇಶಕರು ಹೇಳಿದ್ದಾರೆ. ಚಿತ್ರಪ್ರೇಮಿಗಳು ಸಾಮಾಜಿಕ ಸಾಮರಸ್ಯ ಸಾರುವ ಇಂತಹ ಚಿತ್ರಗಳನ್ನು ಬೆಂಬಲಿಸಬೇಕು” ಎಂದರು.
ಬಳಿಕ ನಟ ಸ್ವರಾಜ್ ಶೆಟ್ಟಿ ಮಾತನಾಡಿ, “ಇದೊಂದು ಡಿಫರೆಂಟ್ ಕಥಾ ಹಂದರವನ್ನು ಒಳಗೊಂಡ ಸಿನಿಮಾ. ಇದರಲ್ಲಿ ಅನೇಕ ಹಿರಿಕಿರಿಯ ಕಲಾವಿದರು ಬಣ್ಣ ಹಚ್ಚಿದ್ದಾರೆ. ಅವರಿಗೆ ನಿಮ್ಮೆಲ್ಲರ ಪ್ರೋತ್ಸಾಹದ ಅಗತ್ಯವಿದೆ. ಚಿತ್ರ ನೋಡಿ ಕಲಾವಿದರನ್ನು ಪ್ರೋತ್ಸಾಹಿಸಿ” ಎಂದರು.

ಹಿರಿಯ ರಂಗಕರ್ಮಿ ವಿ. ಜಿ. ಪಾಲ್, ಹಿರಿಯ ಕಲಾ ನಿರ್ದೇಶಕ ತಮ್ಮ ಲಕ್ಷ್ಮಣ, ಎಂ. ಕೆ. ಮಠ, ಪ್ರಕಾಶ್ ಪಾಂಡೇಶ್ವರ್, ಕಿಶೋರ್ ಶೆಟ್ಟಿ, ಉದ್ಯಮಿ ಪ್ರೇಮ್ ಶೆಟ್ಟಿ, ಜಾನ್ಸನ್ ಮಾರ್ಟೀಸ್, ಎಕೆ ವಿಜಯ ಕೋಕಿಲ, ನಟರಾದ ದೀಪಕ್ ರೈ ಪಾಣಾಜೆ, ತಮ್ಮಣ್ಣ ಶೆಟ್ಟಿ, ಸ್ವರಾಜ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

Ashitha S

Recent Posts

ಹೊಳೆಯಲ್ಲಿ ಸ್ನಾನ ಮಾಡಲು ಹೋಗಿ ಇಬ್ಬರು ಮೃತ್ಯು

ಹೊಳೆಯಲ್ಲಿ ಮುಳುಗಿ ಇಬ್ಬರು ಮೃತಪಟ್ಟಿರುವ ಘಟನೆ ಇಂದು ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಕಡವಿನಕಟ್ಟೆಯಲ್ಲಿ ನಡೆದಿದೆ.

5 mins ago

ರಸ್ತೆ ತಿರುವಿನ ಅಪಾಯಕಾರಿ ವಿದ್ಯುತ್ ತಂತಿಗಳು: ಸುರಕ್ಷಿತ ಎತ್ತರಕ್ಕೆ ಏರಿಕೆ

ಸಾಣೂರಿನ ಲೈನ್ ಮ್ಯಾನ್  ಸುಭಾಷ್ ರವರು ತಮ್ಮ ತಂಡದೊಂದಿಗೆ ಮೇ 17 ರಂದು ಮುರತಂಗಡಿ ಇರುವತ್ತೂರು ರಸ್ತೆ ತಿರುವಿನಲ್ಲಿರುವ ವಿದ್ಯುತ್…

19 mins ago

ಕೇಸ್​ನಲ್ಲಿ ರಿಕವರಿ ಮಾಡಿದ್ದ ಅರ್ಧ ಕೆ.ಜಿ ಚಿನ್ನ ಕದ್ದ ಪೊಲೀಸ್​ ಪೇದೆ

ರಕ್ಷಕರೇ ಭಕ್ಷಕರಾದ ಘಟನೆಯೊಂದು ಕೋಲಾರದಲ್ಲಿ ನಡೆದಿದೆ . ಕಳವು ಕೇಸ್​ನಲ್ಲಿ ರಿಕವರಿ ಮಾಡಿದ್ದ 1 ಕೆಜಿ 408 ಗ್ರಾಂ ಚಿನ್ನದಲ್ಲಿ…

38 mins ago

ಪ್ರಧಾನಿ ನರೇಂದ್ರ ಮೋದಿಯವರು ಮಣ್ಣಿನ ಮಗ: ಕಂಗನಾ ರಣಾವತ್

ಪ್ರಧಾನಿ ನರೇಂದ್ರ ಮೋದಿಯವರು ಮಣ್ಣಿನ ಮಗ, ಬಡ ಕುಟುಂಬದಲ್ಲಿ ಹುಟ್ಟಿ ದೇಶದ ಕಲ್ಯಾಣ ಮತ್ತು ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಎಂದು ಹಿಮಾಚಲ…

54 mins ago

ವಾಸವಿ ಯುವಜನ ಸಂಘದಿಂದ ರಕ್ತದಾನ ಶಿಬಿರ : ದಿನೇಶ್‌ಗುಪ್ತ

ನಗರದ ವಾಸವಿ ಯುವಜನ ಸಂಘ ಮತ್ತು ವಾಸವಿ ಕ್ಲಬ್‌ ಆಶ್ರಯದಲ್ಲಿ ಇಂದು ನಗರದ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರವನ್ನು…

1 hour ago

ಗ್ರಾಮಸ್ಥರ ಆರೋಗ್ಯ ಸುರಕ್ಷತೆಗೆ ಕ್ರಮಕೈಗೊಳ್ಳಲು ಬಿಜೆಪಿ ಒತ್ತಾಯ

ಡೆಂಗ್ಯೂ ಸೋಂಕಿನಿಂದ ಬಳಲುತ್ತಿರುವ ಗ್ರಾಮಕ್ಕೆ ತಜ್ಞ ವೈದ್ಯಾಧಿಕಾರಿ ಗಳ ತಂಡವನ್ನು ರಚಿಸಿ ನಿವಾಸಿಗಳ ಆರೋಗ್ಯ ಕಾಪಾಡಬೇಕು ಎಂದು ಎರೆಹಳ್ಳಿ ಗ್ರಾಮಸ್ಥರು…

1 hour ago