News Karnataka Kannada
Thursday, May 09 2024
ಸಾಂಡಲ್ ವುಡ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ಮುಂದಿನ ಚಿತ್ರಕ್ಕೆ ನಟ ಚಿರಂಜೀವಿ ಎಂಟ್ರಿ

Darshan
Photo Credit : News Kannada

ಬೆಂಗಳೂರು: ದರ್ಶನ್ ನಟನೆಯ ಕಾಟೇರ ಸಿನಿಮಾ ಬಿಡುಗಡೆಗೆ ಕ್ಷಣಗಣನೆ ಶುರುವಾಗಿದೆ. ಇದೇ ಡಿಸೆಂಬರ್ 29ರಂದು ರಾಜ್ಯಾದ್ಯಂತ ಸಿನಿಮಾ ರಿಲೀಸ್ ಆಗುತ್ತಿದೆ. ಈ ಬೆನ್ನಲ್ಲೇ ದರ್ಶನ್ ಕುರಿತಾದ ಮತ್ತೊಂದು ಸುದ್ದಿ ಗಾಂಧಿನಗರದಲ್ಲಿ ಹರಿದಾಡುತ್ತಿದೆ. ಇದು ಸುಳ್ಳೋ ನಿಜವೋ ಗೊತ್ತಿಲ್ಲ. ಆದರೆ, ನಾನಾ ಕಾರಣಗಳಿಂದಾಗಿ ಸುದ್ದಿಗೆ ಮಹತ್ವ ನೀಡಲಾಗುತ್ತಿದೆ.

ಕಾಟೇರ ಸಿನಿಮಾ ರಿಲೀಸ್ ನಂತರ ದರ್ಶನ್ ಈಗಾಗಲೇ ಒಪ್ಪಿಕೊಂಡಿರುವ ಮಿಲನ ಪ್ರಕಾಶ್ ನಿರ್ದೇಶನದ ಚಿತ್ರದಲ್ಲಿ ನಟಿಸಬೇಕಿದೆ. ಇನ್ನೂ ಆ ಸಿನಿಮಾದ ಶೂಟಿಂಗ್ ಕೂಡ ಶುರುವಾಗಿಲ್ಲ. ಆದರೂ, ಮತ್ತೊಂದು ಸಿನಿಮಾದ ಸುದ್ದಿ ಜೋರಾಗಿಯೇ ಕೇಳಿ ಬರುತ್ತಿದೆ. ಜೋಗಿ ಪ್ರೇಮ್ ನಿರ್ದೇಶನದಲ್ಲಿ ದರ್ಶನ್ ಸಿನಿಮಾವೊಂದನ್ನು ಮಾಡಲಿದ್ದು, ಆ ಸಿನಿಮಾದಲ್ಲಿ ತೆಲುಗಿನ ಸೂಪರ್ ಸ್ಟಾರ್ ಚಿರಂಜೀವಿ ಪಾತ್ರ ಮಾಡಲಿದ್ದಾರಂತೆ.

ಈ ಹಿಂದೆ ಕ್ರೇಜಿಸ್ಟಾರ್ ರವಿಚಂದ್ರನ್ ಅವರ ಸಿಪಾಯಿ ಸಿನಿಮಾದಲ್ಲಿ ಚಿರಂಜೀವಿ ಕೊನೆಯದಾಗಿ ಕಾಣಿಸಿಕೊಂಡಿದ್ದರು. ಸಾರ್ವಕಾಲಿಕ ಹಿಟ್ ಹಾಡುಗಳಲ್ಲಿ ಒಂದಾದ, ಸ್ನೇಹಕ್ಕೆ ಸ್ನೇಹ, ಪ್ರೀತಿಗೆ ಪ್ರೀತಿ ಎಂಬ ಶೀರ್ಷಿಕೆಯ ಹಾಡಿನಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಪ್ರೇಮ್ ಮತ್ತು ದರ್ಶನ್ ನಡುವಿನ ಸಹಯೋಗವು ಈಗಾಗಲೇ ಸಿನಿ ಪ್ರಿಯರಲ್ಲಿ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದ್ದು, ಈ ಇಬ್ಬರ ಕಾಂಬಿನೇಷನ್ನಲ್ಲಿ ಕರಿಯಾ ಚಿತ್ರ ಹಿಟ್ ಆಗಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು