ಖ್ಯಾತ ಸಾಹಿತಿ ಪೂರ್ಣಚಂದ್ರ ತೇಜಸ್ವಿ ಅವರ ಕಥೆಯನ್ನು ಆಧರಿಸಿ ತಯಾರಿಸಲಾಗಿದ್ದ ‘ಡೇರ್ ಡೆವಿಲ್ ಮುಸ್ತಫಾ’ ಸಿನಿಮಾಕ್ಕೆ ರಾಜ್ಯ ಸರ್ಕಾರವು ತೆರಿಗೆ ವಿನಾಯಿತಿ ಘೋಷಿಸಿ ಅಧಿಕೃತ ಆದೇಶ ಹೊರಡಿಸಿದೆ. ಸಿನಿಪ್ರಿಯರ ಗಮನ ಸೆಳೆದ ಡೇರ್ಡೆವಿಲ್ ಮುಸ್ತಫಾ ಸಿನಿಮಾಗೆ ರಾಜ್ಯದಲ್ಲಿ ತೆರಿಗೆ ವಿನಾಯಿತಿ ನೀಡಲಾಗಿದೆ.
ಇತ್ತೀಚೆಗೆ 25 ದಿನಗಳನ್ನು ಪೂರೈಸಿದ ‘ಡೇರ್ಡೆವಿಲ್ ಮುಸ್ತಫಾ’ ಸಿನಿಮಾ ಈಗ 50ನೇ ದಿನದತ್ತ ಮುನ್ನುಗ್ಗುತ್ತಿದೆ.
ಈ ಸಂದರ್ಭದಲ್ಲಿ ಚಿತ್ರಕ್ಕೆ ತೆರಿಗೆ ವಿನಾಯಿತಿ ಸಿಕ್ಕಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶ ಹೊರಡಿಸಿದ್ದಾರೆ. ಡೇರ್ ಡೆವಿಲ್ ಮುಸ್ತಫಾ ಸಿನಿಮಾವನ್ನು ಶಶಾಂಕ್ ಸೋಗಾಲ್ ನಿರ್ದೇಶನ ಮಾಡಿದ್ದಾರೆ. ಸಿನಿಮಾಗೆ ತೆರಿಗೆ ವಿನಾಯಿತಿ ನೀಡುವಂತೆ ಸಿಎಂ ಸಿದ್ದರಾಮಯ್ಯಗೆ ಶಶಾಂಕ್ ಮನವಿ ಮಾಡಿದ್ದರು.
ಇದೀಗ ಸಿಎಂ ಮನವಿಗೆ ಸ್ಪಂದಿಸಿದ್ದು, ಚಿತ್ರಕ್ಕೆ ತೆರಿಗೆ ವಿನಾಯಿತಿ ಘೋಷಿಸಿದೆ. ಶಿಶಿರ್ ಬೈಕಾಡಿ, ಆದಿತ್ಯ ಆಶ್ರೀ, ಸುಪ್ರೀತ್ ಭಾರದ್ವಾಜ್, ಆಶಿತ್ ಶ್ರೀವತ್ಸಾ, ಅಭಯ್, ಮಂಡ್ಯ ರಮೇಶ್, ಉಮೇಶ್, ಪ್ರೇರಣಾ ಮುಂತಾದ ಕಲಾವಿದರು ‘ಡೇರ್ಡೆವಿಲ್ ಮುಸ್ತಫಾ’ ಸಿನಿಮಾದಲ್ಲಿ ನಟಿಸಿದ್ದಾರೆ.