ಬೆಂಗಳೂರು: ಮಹಿಳೆಯೊಬ್ಬರಿಗೆ ನಟ ದರ್ಶನ್ ಮನೆಯಲ್ಲಿ ಸಾಕಿದ್ದ ನಾಯಿಗಳು ದಾಳಿ ಮಾಡಿ ಗಾಯಗೊಳಿಸಿದ್ದವು. ಈ ಘಟನೆ ಸಂಬಂಧ ದೂರು ದಾಖಲಾಗಿತ್ತು. ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದ ಹಿನ್ನಲೆ, ಇಂದು ಆರ್ ಆರ್ ನಗರ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್ ಮುಂದೆ ದರ್ಶನ್ ಹಾಜರಾಗಿದ್ದಾರೆ.
ಅಮಿತಾ ಜಿಂದಾಲ್ ಎಂಬುವವರಿಗೆ ದರ್ಶನ್ ಮನೆಯ ನಾಯಿ ಕಚ್ಚಿದ ಬಳಿಕ ಐಪಿಸಿ ಸೆಕ್ಷನ್ 289ರ ಅಡಿಯಲ್ಲಿ ಕೇಸ್ ದಾಖಲಾಗಿತ್ತು. ಆ ಪ್ರಕರಣದ ವಿಚಾರಣೆ ಚುರುಕುಗೊಂಡಿದೆ. ಈ ಪ್ರಕರಣದಲ್ಲಿ ಇಂದು ಬೆಳಗ್ಗೆ 11.30ಕ್ಕೆ ನಟ ದರ್ಶನ್ ಅವರು ರಾಜ ರಾಜೇಶ್ವರಿ ನಗರ ಪೊಲೀಸ್ ಠಾಣೆಯ ಠಾಣಾಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಲಿದ್ದಾರೆ ಎನ್ನಲಾಗಿತ್ತು. ಅದರೇ ಆ ಸಮಯದ ಬದಲಾಗಿ ಇದೀಗ ನಟ ದರ್ಶನ್ ಆರ್ ಆರ್ ನಗರ ಪೊಲೀಸ್ ಠಾಣೆಗೆ ಹಾಜರಾಗಿ, ವಿಚಾರಣೆಗೆ ಒಳಗಾಗಿದ್ದಾರೆ.