ಹೆಸರಾಂತ ಸಿನೆಮಾ ನಿರ್ಮಾಣ ಸಂಸ್ಥೆ ಲೈಕಾ ಪ್ರೊಡಕ್ಷನ್ ಲಾಂಛನದಲ್ಲಿ ಸುಭಾಸ್ಕರನ್ ಅವರು ನಿರ್ಮಿಸುತ್ತಿರುವ , ಲಕ್ಷ್ಮಣ್ ನಿರ್ದೇಶನದಲ್ಲಿ ನಿಖಿಲ್ ಕುಮಾರ್ ನಾಯಕರಾಗಿ ನಟಿಸುತ್ತಿರುವ ನೂತನ ಚಿತ್ರದ ಚಿತ್ರೀಕರಣ ಬೆಂಗಳೂರಿನಲ್ಲಿ ಸಾಗುತ್ತಿದೆ.
ಈ ಚಿತ್ರದಲ್ಲಿ ಸ್ಯಾಂಡಲ್ ವುಡ್ ಸಲಗ ದುನಿಯಾ ವಿಜಯ್ ಅವರು ನಟಿಸುತ್ತಿದ್ದಾರೆ. ವಿಜಯ್ ಅವರ ಪಾತ್ರದ ಬಗ್ಗೆ ಚಿತ್ರತಂಡ ಗುಟ್ಟು ಬಿಟ್ಟುಕೊಟ್ಟಿಲ್ಲ. ಸದ್ಯದಲ್ಲೇ ವಿಜಯ್ ಅವರು ಚಿತ್ರೀಕರಣದಲ್ಲಿ ಭಾಗಿಯಾಗಲಿದ್ದಾರೆ. ವಿಜಯ್ ಅವರ ಪಾತ್ರ ಏನ್ನಿರಬಹುದು? ಎಂಬ ಕುತೂಹಲ ಅಭಿಮಾನಿಗಳಲ್ಲಿದೆ. ಇದೊಂದು ಬಹಳ ಮಹತ್ವದ ಪಾತ್ರವಾಗಿದ್ದು, ದುನಿಯಾ ವಿಜಯ್ ಅವರೇ ಸೂಕ್ತ ಎಂಬ ಕಾರಣಕ್ಕೆ ಅವರನ್ನು ಚಿತ್ರತಂಡ ಆಯ್ಕೆ ಮಾಡಿದೆ. ಇನ್ನು ಈ ಸಿನಿಮಾದ ಮೂಲಕ ಬಾಲಿವುಡ್ ನಟಿ ಯುಕ್ತಿ ತಾರೇಜ ಸ್ಯಾಂಡಲ್ ವುಡ್ ಗೆ ಪ್ರವೇಶ ಮಾಡಿದ್ದಾರೆ.