News Karnataka Kannada
Monday, April 29 2024
ಸಾಂಡಲ್ ವುಡ್

ಏಕ ದಿನ ಇಹಲೋಕ ತ್ಯಜಿಸಿದ ತಾಯಿ ಹಾಗೂ ತಂದೆ: ದ್ವಾರಕೀಶ್ ಪುತ್ರ

Dwarakish
Photo Credit : NewsKarnataka

ಬೆಂಗಳೂರು: ಕನ್ನಡದ​ ಹಿರಿಯ ನಟ ದ್ವಾರಕೀಶ್ ಅವರು ಇಂದು (ಏ 16) ನಿಧನ ಹೊಂದಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದು, ಹೃದಯಾಘಾತದಿಂದ ಸ್ವಗೃಹದಲ್ಲಿ ವಿಧಿವಶರಾಗಿದ್ದಾರೆ.

ʼರಾತ್ರಿ ಲೂಸ್ ಮೋಷನ್ ಆಯ್ತು. ರಾತ್ರಿ ನಿದ್ದೆ ಮಾಡಿರಲಿಲ್ಲ. ಬೆಳಿಗ್ಗೆ ಕಾಫಿ ಕುಡಿದು ಎರಡು ಗಂಟೆ ಮಲಗುತ್ತೇನೆ ಎಂದು ನಿದ್ರಿಸಿದ್ದರು. ಮಲಗಿದವರು ಎದ್ದೇ ಇಲ್ಲ. ಅವರಿಗೆ ಹೃದಯಾಘಾತ ಆಗಿದೆ’. ಇದಲ್ಲದೇ “ತಾಯಿ ಹಾಗೂ ತಂದೆ ಏಕ ದಿನ ಇಹಲೋಕ ತ್ಯಜಿಸಿದ್ದಾರೆ. ತಾಯಿ ಅಂಬುಜ ಏಪ್ರಿಲ್ 16 2021 ರಂದು ಮುಂಜಾನೆ 9.45 ಕ್ಕೆ ಸಾವನ್ನಪ್ಪಿದ್ದರು. ತಂದೆ ಏಪ್ರಿಲ್ 16ರ ಇಂದು ಮುಂಜಾನೆ 9.45 ಕ್ಕೆ ಇಹ ಲೋಕ ತ್ಯಜಿಸಿದ್ದಾರೆ” ಎಂದು ದ್ವಾರಕೀಶ್ ಪುತ್ರ ಯೋಗಿ ಹೇಳಿದ್ದಾರೆ.

ಇನ್ನು ಸಾರ್ವಜನಿಕರ ಅಂತಿಮ ದರ್ಶನಕ್ಕಾಗಿ ದ್ವಾರಕೀಶ್ ಪಾರ್ಥೀವ ಶರೀರವನ್ನು ರವೀಂದ್ರ ಕಲಾಕ್ಷೇತ್ರದಲ್ಲಿ ಇಡುವ ವ್ಯವಸ್ಥೆ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಮಾಡುತ್ತಿದೆ ಎಂದು ಖ್ಯಾತ ನಿರ್ಮಾಪಕ ಕೆ ಮಂಜು ಅವರು ತಿಳಿಸಿದ್ದಾರೆ. ಅಂದಹಾಗೇ, ನಾಳೆ ಮಧ್ಯಾಹ್ನ ಚಾಮರಾಜಪೇಟೆ ರುದ್ರದ್ವಾರಕೀಶ್ ಭೂಮಿಯಲ್ಲಿ ನಟ ದ್ವಾರಕೀಶ್ ಅಂತ್ಯಸಂಸ್ಕಾರ ನಡೆಯಲಿದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು