‘ಲೂಸಿಯಾ’ ಖ್ಯಾತಿಯ ನಿರ್ದೇಶಕ ಪವನ್ ಕುಮಾರ್ ಅವರು ಚಿತ್ರರಂಗದಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ. ಅವರ ನಿರ್ದೇಶನದ ಬಗ್ಗೆ ಪ್ರೇಕ್ಷಕರಿಗೆ ಭರವಸೆ ಇದೆ. ‘ಯು ಟರ್ನ್’ ನಂತರ ಅವರು ದೊಡ್ಡ ಗ್ಯಾಪ್ ತೆಗೆದುಕೊಂಡು ‘ಧೂಮಂ’ ಸಿನಿಮಾ ಮಾಡಿದ್ದಾರೆ. ವಿಶೇಷ ಏನೆಂದರೆ ಈ ಚಿತ್ರ ಕನ್ನಡ ಮತ್ತು ಮಲಯಾಳಂ ಭಾಷೆಯಲ್ಲಿ ಬಿಡುಗಡೆ ಆಗಿದೆ.
ಇಂದು (ಜೂನ್ 23) ತೆರೆಕಂಡಿರುವ ಈ ಚಿತ್ರದಲ್ಲಿ ಪ್ರತಿಭಾನ್ವಿತ ಕಲಾವಿದರಾದ ಫಹಾದ್ ಫಾಸಿಲ್, ರೋಷನ್ ಮ್ಯಾಥೀವ್, ಅಪರ್ಣಾ ಬಾಲಮುರಳಿ, ಅಚ್ಯುತ್ ಕುಮಾರ್ ಮುಂತಾದವರು ನಟಿಸಿದ್ದಾರೆ. ‘ಹೊಂಬಾಳೆ ಫಿಲ್ಮ್ಸ್’ ಮೂಲಕ ಈ ಸಿನಿಮಾ ನಿರ್ಮಾಣ ಆಗಿದೆ. ಪೂರ್ಣಚಂದ್ರ ತೇಜಸ್ವಿ ಅವರು ಸಂಗೀತ ನಿರ್ದೇಶನ ಮಾಡಿದ್ದಾರೆ. ಪೋಸ್ಟರ್ ಮತ್ತು ಟ್ರೇಲರ್ ಮೂಲಕ ಗಮನ ಸೆಳೆದ ‘ಧೂಮಂ’ ಸಿನಿಮಾ ಧೂಮಪಾನದ ಹಿಂದಿರಬಹುದಾದ ಕರಾಳ ಜಗತ್ತಿನ ಪರಿಚಯ ಮಾಡಿಸುವ ರೀತಿ ಇದೆ. ಇಂದು ಪ್ರೇಕ್ಷಕರು ಈ ಸಿನೆಮಾವನ್ನು ಮೆಚ್ಚಿದ್ದಾರೆ.