News Karnataka Kannada
Friday, April 12 2024
Cricket
ಸಾಂಡಲ್ ವುಡ್

ರಾಜ್ ಬಿ ಶೆಟ್ಟಿ ನಾಯಕರಾಗಿ ನಟಿಸಿರುವ ‘ಟೋಬಿ’ ಚಿತ್ರ ತೆರೆಗೆ ಬರಲು ಸಿದ್ದ

Tobi film poster
Photo Credit : Twitter

ರಾಜ್ ಬಿ ಶೆಟ್ಟಿ ನಾಯಕರಾಗಿ ನಟಿಸಿರುವ ‘ಟೋಬಿ’ ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ವಿಭಿನ್ನ ಕಥೆಯ ಈ ಚಿತ್ರ ಆಗಸ್ಟ್ 25 ರಂದು ಬಿಡುಗಡೆಯಾಗಲಿದೆ.‌ ಪ್ರತಿಷ್ಠಿತ ಕೆ.ವಿ.ಎನ್ ಪ್ರೊಡಕ್ಷನ್ಸ್ ಈ ಚಿತ್ರದ ವಿತರಣೆ ಹಕ್ಕು ಪಡೆದುಕೊಂಡಿದೆ. ಟೋಬಿ ಚಿತ್ರಕ್ಕೆ ‘ಮಾರಿ ಮಾರಿ ..ಮಾರಿಗೆ ದಾರಿ’ ಎಂಬ ಅಡಿಬರಹವಿದೆ.

ಮೋಷನ್ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಈ ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯಾಗಿದ್ದು, ಮೋಷನ್ ಪೋಸ್ಟರ್ ಸಾಕಷ್ಟು ಕುತೂಹಲ ಮೂಡಿಸಿದೆ. ಮತ್ತೊಂದು ಖುಷಿ ಸಂಗತಿ ಅಂದರೆ, ಈ ಚಿತ್ರಕ್ಕೆ ಕಥೆ ಬರೆದದ್ದು ಖ್ಯಾತ ಕಥೆಗಾರ ಟಿ.ಕೆ ದಯಾನಂದ್ . ಸಂಭಾಷಣೆಗಾರರಾಗಿ, ನಿರ್ದೇಶಕರಾಗಿಯೂ ಗುರುತಿಸಿಕೊಂಡಿರುವ ಟಿ.ಕೆ ದಯಾನಂದ್, ಬೆಲ್ ಬಾಟಮ್, ಅಶೋಕ ಬ್ಲೇಡ್ ಸೇರಿದಂತೆ ಅನೇಕ ಸಿನಿಮಾಗಳಿಗೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ. ಟೋಬಿಗೂ ಕೂಡ ಇವರದ್ದೇ ಕಥೆಯಿದೆ.

ರಾಜ್ ಬಿ ಶೆಟ್ಟಿ ರಚೆನೆ ಹಾಗೂ ಬಾಸಿಲ್ ಅವರ ನಿರ್ದೇಶನ ಈ ಚಿತ್ರಕ್ಕಿದೆ. ರಾಜ್ ಬಿ ಶೆಟ್ಟಿ, ಸಂಯುಕ್ತ ಹೊರನಾಡು, ಚೈತ್ರಾ ಆಚಾರ್, ಗೋಪಾಲಕೃಷ್ಣ ದೇಶಪಾಂಡೆ, ದೀಪಕ್ ರಾಜ್ ಶೆಟ್ಟಿ ಮುಂತಾದವರು ತಾರಾಬಳಗದಲ್ಲಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು