‘ಘೋಸ್ಟ್’ ಚಿತ್ರದ ಬಿಗ್ ಡ್ಯಾಡಿ ಟೀಸರ್​ ಬಿಡುಗಡೆ

ಸೆಂಚುರಿ ಸ್ಟಾರ್ ಶಿವರಾಜ್​ಕುಮಾರ್​ ಅವರು ಹಲವು ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಇಂದು (ಜುಲೈ 12) ಅವರ ಜನ್ಮದಿನದ ಪ್ರಯುಕ್ತ ಆ ಎಲ್ಲ ಸಿನಿಮಾಗಳಿಂದ ಅಪ್​ಡೇಟ್​ ಲಭ್ಯವಾಗಿದೆ. ಅದರಲ್ಲೂ ‘ಘೋಸ್ಟ್​’ ಸಿನಿಮಾದಿಂದ ಬಿಡುಗಡೆ ಆಗಿರುವ ‘ಬಿಗ್​ ಡ್ಯಾಡಿ’ ಟೀಸರ್​ ಹೆಚ್ಚಿನ ಹವಾ ಸೃಷ್ಟಿ ಮಾಡಿದೆ. ಈ ಟೀಸರ್​ಗಾಗಿ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದರು.

ಆ ನಿರೀಕ್ಷೆಗೆ ತಕ್ಕಂತೆಯೇ ನಿರ್ದೇಶಕ ಶ್ರೀನಿ ಅವರು ಈ ಟೀಸರ್​ ಕಟ್ಟಿಕೊಟ್ಟಿದ್ದಾರೆ. ಹತ್ತಾರು ಗನ್​ ಹಿಡಿದು ಬರುವ ಗುಂಪನ್ನು ಶಿವಣ್ಣ ಕಣ್ಣಿನಲ್ಲೇ ಹೆದರಿಸುತ್ತಾರೆ. ಆಗ ಅವರು ಹೇಳುವ ಡೈಲಾಗ್​ ಕೂಡ ಖಡಕ್​ ಆಗಿದೆ. ಸದ್ಯ ಯೂಟ್ಯೂಬ್​ನಲ್ಲಿ ‘ಘೋಸ್ಟ್​’ ಸಿನಿಮಾದ ‘ಬಿಗ್​ ಡ್ಯಾಡಿ’ ಟೀಸರ್​ ಧೂಳೆಬ್ಬಿಸುತ್ತಿದೆ. . ಈ ಚಿತ್ರದಲ್ಲಿ ಶಿವರಾಜ್​ಕುಮಾರ್​ ಅವರು ಗ್ಯಾಂಗ್​ಸ್ಟರ್​ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ.

‘ಸಂದೇಶ್ ಪ್ರೊಡಕ್ಷನ್ಸ್’ ಮೂಲಕ ಸಂದೇಶ್​ ಎನ್​. ಅವರು ಅದ್ದೂರಿ ಬಜೆಟ್​ನಲ್ಲಿ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ದತ್ತಣ್ಣ, ಅನುಪಮ್ ಖೇರ್, ಸತ್ಯಪ್ರಕಾಶ್, ಪ್ರಶಾಂತ್ ನಾರಾಯಣನ್, ಅಭಿಜಿತ್, ಜಯರಾಂ ಮುಂತಾದ ಕಲಾವಿದರು ಈ ಸಿನಿಮಾದಲ್ಲಿದ್ದಾರೆ.

Ashitha S

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

3 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

3 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

4 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

4 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

4 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

5 hours ago