News Karnataka Kannada
Sunday, April 14 2024
Cricket
ಸಾಂಡಲ್ ವುಡ್

ಗೋಲ್ಡನ್ ಸ್ಟಾರ್ ಹುಟ್ಟುಹಬ್ಬ: ‘ಕೃಷ್ಣಂ ಪ್ರಣಯಸಖಿ’ ಫಸ್ಟ್ ಲುಕ್ ಬಿಡುಗಡೆ

golden star ganesh
Photo Credit : Twitter

ಸ್ಯಾಂಡಲ್‌ವುಡ್‌ನ ಗೋಲ್ಡನ್ ಹೀರೋ ಗೋಲ್ಡನ್ ಸ್ಟಾರ್ ಗಣೇಶ್  ಅವರು ತಮ್ಮ ಹುಟ್ಟುಹಬ್ಬದ ದಿನ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ.  ಗಣೇಶ್ ನಾಯಕರಾಗಿ ನಟಿಸುತ್ತಿರುವ ಹೊಸ ಚಿತ್ರ ‘ಕೃಷ್ಣಂ ಪ್ರಣಯಸಖಿ’. ಇದು ಗಣೇಶ್ ನಾಯಕರಾಗಿ ನಟಿಸುತ್ತಿರುವ 41 ನೇ ಚಿತ್ರವಿದು‌. ಕನ್ನಡದ ಹಲವು ಜನಪ್ರಿಯ ಚಿತ್ರಗಳನ್ನು ನಿರ್ದೇಶಿಸಿರುವ ಶ್ರೀನಿವಾಸರಾಜು ಈ ಚಿತ್ರವನ್ನು ನಿರ್ದೇಶಿಸಿಸುತ್ತಿದ್ದಾರೆ.

ಕೌಟುಂಬಿಕ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಬೆಂಗಳೂರಿನಲ್ಲಿ ಚಿತ್ರೀಕರಣ ನಡೆಯುತ್ತಿದೆ. ಜುಲೈ 2ರ ಇಂದು ನಾಯಕ ಗಣೇಶ್ ಅವರ ಹುಟ್ಟುಹಬ್ಬ. ಈ ಸಂದರ್ಭದಲ್ಲಿ ಫಸ್ಟ್ ಲುಕ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡ ಗಣೇಶ್ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದೆ. ತ್ರಿಶೂಲ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಪ್ರಶಾಂತ್ ಜಿ ರುದ್ರಪ್ಪ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.

ಗಣೇಶ್ ಅವರಿಗೆ ನಾಯಕಿಯಾಗಿ ಮಾಳವಿಕ ನಾಯರ್ ನಟಿಸುತ್ತಿದ್ದಾರೆ. ಸಾಧುಕೋಕಿಲ, ರಂಗಾಯಣ ರಘು, ಶಶಿಕುಮಾರ್, ಶ್ರುತಿ, ಸುಧಾರಾಣಿ, ಶ್ರೀನಿವಾಸಮೂರ್ತಿ, ಶಿವಧ್ವಜ್ ಶೆಟ್ಟಿ, ಬೆನಕ ಗಿರಿ ಮುಂತಾದ ಕಲಾವಿದರು “ಕೃಷ್ಣಂ ಪ್ರಣಯ ಸಖಿ” ಚಿತ್ರದಲ್ಲಿ ನಟಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು