ದರ್ಶನ್ ನಟನೆಯ ‘ಕಾಟೇರ’ ಸಿನಿಮಾ ಡಿ.29ರಂದು ರಾಜ್ಯದಾದ್ಯಂತ ಸಿನಿಮಾ ರಿಲೀಸ್ ಆಗುತ್ತಿದ್ದು, ಟಿಕೆಟ್ ಬುಕ್ಕಿಂಗ್ ಶುರುವಾಗಿ ಕೇವಲ 72 ಗಂಟೆಗಳಲ್ಲಿ ಬರೋಬ್ಬರಿ 50 ಸಾವಿರ ಟಿಕೆಟ್ ಸೇಲ್ ಆಗಿದೆ ಎನ್ನುವ ಮಾಹಿತಿ ಸಿಕ್ಕಿದೆ. ಮುಂಗಡ ಟಿಕೆಟ್ ಬುಕ್ಕಿಂಗ್ ಶುರುವಾಗಿ 48 ಗಂಟೆಗಳಲ್ಲಿ ಒಂದು ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಆಗಿದೆ. ದರ್ಶನ್ ಈ ಸಿನಿಮಾದ ಕಥೆಯು ನೈಜ ಘಟನೆಯನ್ನು ಆಧರಿಸಿದ್ದು, ಅದು ಇಂದಿರಾ ಗಾಂಧಿ ಕಾಲದ ಕಥೆಯಾಗಿದೆ ಎಂದು ಗುಟ್ಟು ಬಿಟ್ಟುಕೊಟ್ಟಿದ್ದಾರೆ.
ಅದು 1974ರ ಕಾಲ. ಉಳುವವನೆ ಭೂಮಿಯ ಒಡೆಯ ಕಾನೂನು ಬಂದಾಗ ನಡೆದಿರುವ ಘಟನೆ. ಆವಾಗ ಬಾವಿಯೊಂದರಲ್ಲಿ ತುಂಬಾ ಜನರ ಮೂಳೆಗಳು ಸಿಕ್ಕಿದ್ದವು. ಆ ಮೂಳೆಗಳು ಯಾರವು ಅಂತ ಯಾರಿಗೂ ಗೊತ್ತಿಲ್ಲ. ಆ ಕಹಿ ಘಟನೆಯನ್ನು ಈ ಸಿನಿಮಾದಲ್ಲಿ ಹೇಳಲು ಹೊರಟಿದ್ದೇವೆ ಎಂದು ದರ್ಶನ್ ತಿಳಿಸಿದ್ದಾರೆ.