‘ಕಿರಿಕ್ ಪಾರ್ಟಿ’ ಚಿತ್ರದ ನಟಿ ಸಂಯುಕ್ತ ಹೆಗ್ಡೆ ಕೆಲ ಸಮಯದಿಂದ ಚಿತ್ರರಂಗದಿಂದ ದೂರವಾಗಿದ್ದರು. ತೆಲುಗು, ತಮಿಳು ಸಿನಿಮಾಗಳಲ್ಲಿ ನಟಿಸುತ್ತಿದ್ದ ಸಂಯುಕ್ತ ಇದೀಗ ಕ್ರೀಮ್ ಎಂಬ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ವೇಳೆ ಸಾಹಸ ದೃಶ್ಯದ ಚಿತ್ರೀಕರಣದ ಗಾಯಗೊಂಡಿದ್ದು, ಅವರಿಗೆ ಈಗ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.
ಫೈಟ್ ಮಾಸ್ಟರ್ ಪ್ರಭು ಸಮ್ಮುಖದಲ್ಲಿ ಈ ಸಾಹಸ ದೃಶ್ಯದ ಚಿತ್ರೀಕರಣ ನಡೆಯುತ್ತಿದ್ದ ವೇಳೆ ಅಚಾತುರ್ಯದಿಂದ ಸಂಯುಕ್ತ ಹೆಗ್ಡೆ ಅವರ ಕಾಲು ಹಾಗು ತಲೆಗೆ ಬಲವಾದ ಪೆಟ್ಟು ಬಿದ್ದಿದೆ ಎಂದು ತಿಳಿದುಬಂದಿದೆ.
ಈ ಹಿನ್ನೆಲೆಯಲ್ಲಿ ಸಂಯುಕ್ತ ಹೆಗ್ಡೆ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಚಿತ್ರೀಕರಣವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಇನ್ನು ಮುಂದೆ ಇಂತಹ ದೃಶ್ಯಗಳ ಚಿತ್ರೀಕರಣದ ಸಂದರ್ಭದಲ್ಲಿ ಡ್ಯೂಪ್ ಬಳಸುವಂತೆ ಸಂಬಂಧಪಟ್ಟವರು ನಿರ್ದೇಶಕರಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.