ಬೆಂಗಳೂರು: ಕಾಂತಾರ ಚಿತ್ರ ಖ್ಯಾತಿಯ ನಟಿ ಸಪ್ತಮಿ ಗೌಡ ಬೆಂಗಳೂರಿನ ಜೆ.ಪಿ ನಗರದಲ್ಲಿರುವ ಸೇಂಟ್ ಪೌಲ್ ಸ್ಕೂಲ್ ಗೆ ಆಗಮಿಸಿ ತಮ್ಮ ಮತವನ್ನು ಚಲಾಯಿಸಿದ್ದಾರೆ.
ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನನ್ನ ಹಕ್ಕು ಚಲಾಯಿಸಿದ್ದೇನೆ. ಎಲ್ಲರೂ ತಪ್ಪದೇ ಮತದಾನ ಮಾಡಿ. ಮತದಾನ ಎಲ್ಲರ ಕರ್ತವ್ಯ ಎಂದರು.
ಬೆಳ್ಳಂಬೆಳಗ್ಗೆ 7.20ಕ್ಕೆ ಆರ್.ಆರ್ ನಗರದ ಬೂತ್ ಗೆ ಬಂದ ನಟ ಗಣೇಶ್ ಮತ್ತು ನಿರ್ಮಾಪಕಿ ಶಿಲ್ಪಾ ಗಣೇಶ್ ಮತದಾನ ಮಾಡಿ, ಮಾದರಿಯಾದರು.