News Karnataka Kannada
Thursday, May 02 2024
ಸಾಂಡಲ್ ವುಡ್

ಆಸ್ಕರ್‌ ಅರ್ಹತೆ ಪಡೆದುಕೊಂಡ ರಿಷಬ್‌ ಶೆಟ್ಟಿ ನಿರ್ದೇಶನದ ʼಕಾಂತಾರʼ ಸಿನಿಮಾ

Kantara’s prequel is in pre-production stage
Photo Credit : Twitter

ಬೆಂಗಳೂರು: ರಿಷಬ್‌ ಶೆಟ್ಟಿ ನಿರ್ದೇಶನದ ʼಕಾಂತಾರʼ ಸಿನಿಮಾ ಆಸ್ಕರ್‌ ರೇಸ್‌ ನಲ್ಲಿ ಸ್ಥಾನ ಪಡೆದುಕೊಂಡಿದೆ. ಈ ಬಗ್ಗೆ ಹೊಂಬಾಳೆ ಫಿಲ್ಮ್ಸ್‌ ಅಧಿಕೃತವಾಗಿ ಟ್ವಿಟರ್‌ ನಲ್ಲಿ ಮಾಹಿತಿಯನ್ನು ಹಂಚಿಕೊಂಡಿದೆ.

ಇತ್ತೀಚೆಗೆ ʼಕಾಂತಾರʼ ಸಿನಿಮಾವನ್ನು ಆಸ್ಕರ್‌ ಗೆ ಕಳುಹಿಸಲು ಅರ್ಜಿ ಸಲ್ಲಿಸಿದ್ದೇವೆ ಎಂದು ನಿರ್ಮಾಪಕ ವಿಜಯ್‌ ಕಿರಂದೂರು ಅವರು ಹೇಳಿದ್ದರು. ಟ್ವಿಟರ್‌ ನಲ್ಲಿ ಕಾಂತಾರಕ್ಕೆ ಆಸ್ಕರ್‌ ಸಿಗಬೇಕೆಂದು ಹಲವು ಮಂದಿ ಆಗ್ರಹಿಸಿದ್ದರು. ಪ್ರೇಕ್ಷಕರ ಮನವಿಯಂತೆ ಚಿತ್ರ ತಂಡ ಆಸ್ಕರ್‌ ಗಾಗಿ ಕಾಂತಾರವನ್ನು ಪರಿಗಣಿಸುವಂತೆ ಅರ್ಜಿ ಸಲ್ಲಿಸಿತ್ತು.

ಈ ಅರ್ಜಿ ಈಗ ಆಸ್ಕರ್‌ ಒಪ್ಪಿಕೊಂಡಿದ್ದು, ಆ ಮೂಲಕ ʼಕಾಂತಾರʼ ಸಿನಿಮಾ ಕೂಡ ಆಸ್ಕರ್ ರೇಸ್‌ ನಲ್ಲಿ ಕಾಣಿಸಿಕೊಳ್ಳಲಿದೆ.‌ ಈ ಬಗ್ಗೆ ಹೊಂಬಾಳೆ ಫಿಲ್ಮ್ಸ್‌ ಅಧಿಕೃತವಾಗಿ ಟ್ವೀಟ್‌ ಮಾಡಿ ವಿಷಯವನ್ನು ಹಂಚಿಕೊಂಡಿದೆ.

‘ಕಾಂತಾರ’ ಚಿತ್ರಕ್ಕೆ 2 ಆಸ್ಕರ್ ಅರ್ಹತೆ ಸಿಕ್ಕಿದೆ ಎಂದು ಹಂಚಿಕೊಳ್ಳಲು ನಮಗೆ ಅತೀವ ಸಂತಸವಾಗುತ್ತಿದೆ! ನಮ್ಮನ್ನು ಬೆಂಬಲಿಸಿದ ಎಲ್ಲರಿಗೂ ಹೃತ್ಪೂರ್ವಕ ಧನ್ಯವಾದಗಳು. ನಿಮ್ಮೆಲ್ಲರ ಬೆಂಬಲದೊಂದಿಗೆ ಈ ಪ್ರಯಾಣವನ್ನು ಹಂಚಿಕೊಳ್ಳಲು ನಾವು ಎದುರು ನೋಡುತ್ತಿದ್ದೇವೆ ಎಂದಿದೆ.

ಉತ್ತಮ ಚಿತ್ರ ಹಾಗೂ ಉತ್ತಮ ನಟ ವಿಭಾಗದಲ್ಲಿ 301 ಸಿನಿಮಾಗಳೊಂದಿಗೆ ʼಕಾಂತಾರʼ ಪ್ರಶಸ್ತಿಗೆ ಸೆಣಸಾಟ ನಡೆಸಲಿದೆ.  ಈ ವರ್ಷದ ಆಸ್ಕರ್ ಪ್ರಶಸ್ತಿಯ ಅಂತಿಮ ನಾಮನಿರ್ದೇಶನ ಜ. 24ರಂದು ಘೋಷಣೆಯಾಗಲಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು