ಮುಂಬೈ: ರಿಷಬ್ ಶೆಟ್ಟಿ ನಟಿಸಿ ನಿರ್ದೇಶಿಸುತ್ತಿರುವ ‘ಕಾಂತಾರ-ಒಂದು ದಂತಕಥೆ’ಯ ಮೊದಲ ಅಧ್ಯಾಯ ರಿಲೀಸ್ ಗೂ ಮೊದಲೇ ಭರ್ಜರಿ ಕಲೆಕ್ಷನ್ ಮಾಡಿದೆ. ದೊಡ್ಡ ಮೊತ್ತಕ್ಕೆ ಪ್ರೈಂ ವಿಡಿಯೊ ಈ ಸಿನಿಮಾವನ್ನು ಖರೀದಿಸಿದೆ. ಮುಂಬೈನಲ್ಲಿ ನಡೆದ ಕಾರ್ಯಕ್ರಮದಲ್ಲಿ ತಾನು ಖರೀದಿಸಿದ 29 ಸಿನಿಮಾಗಳ ಶೀರ್ಷಿಕೆಯನ್ನು ಪ್ರೈಂ ಘೋಷಿಸಿತು.
ರಿಷಬ್ ಶೆಟ್ಟಿ ಹಾಗೂ ಚಿತ್ರದ ನಿರ್ಮಾಪಕ ವಿಜಯ್ ಕಿರಗಂದೂರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ವರಾಹ ರೂಪಂ ಹಾಡಿಗೆ ಯಕ್ಷಗಾನ ಕಲಾವಿದರು ಪ್ರದರ್ಶನ ನೀಡಿದ ಬಳಿಕ, ಪ್ರೈಂ ತಂಡವು ‘ಕಾಂತಾರ-ಒಂದು ದಂತಕಥೆ’ ಅಧ್ಯಾಯ 1ರ ಬಿಡುಗಡೆಯನ್ನು ಘೋಷಿಸಿತು. ಸಿನಿಮಾದ ಚಿತ್ರೀಕರಣ ಈಗಾಗಲೇ ಆರಂಭವಾಗಿದ್ದು, ಹೊಸ ಸಿನಿಮಾ ‘ಕಾಂತಾರ-ಒಂದು ದಂತಕಥೆ’ಯ ಪ್ರೀಕ್ವೆಲ್ ಆಗಿದ್ದು, ಕದಂಬರ ಕಾಲದಲ್ಲಿ ನಡೆಯುವ ಕಥೆಯನ್ನು ಹೊಂದಿದೆ.
ಬಲ್ಲ ಮಾಹಿತಿಗಳ ಪ್ರಕಾರ ‘ಕಾಂತಾರ’: ಚಾಪ್ಟರ್- 1 ಓಟಿಟಿ ರೈಟ್ಸ್ ಅಂದಾಜು 150 ಕೋಟಿ ರೂ.ಗೆ ಮಾರಾಟವಾಗಿದೆ ಎನ್ನಲಾಗುತ್ತಿದೆ.