ದಾಖಲೆ ಬೆಲೆಗೆ ಮಾರಾಟವಾದ ʼಕಾಂತಾರ ಪ್ರೀಕ್ವೆಲ್‌ʼ ಓಟಿಟಿ ರೈಟ್ಸ್

ಮುಂಬೈ:  ರಿಷಬ್‌ ಶೆಟ್ಟಿ ನಟಿಸಿ ನಿರ್ದೇಶಿಸುತ್ತಿರುವ ‘ಕಾಂತಾರ-ಒಂದು ದಂತಕಥೆ’ಯ ಮೊದಲ ಅಧ್ಯಾಯ ರಿಲೀಸ್ ಗೂ ಮೊದಲೇ ಭರ್ಜರಿ ಕಲೆಕ್ಷನ್ ಮಾಡಿದೆ. ದೊಡ್ಡ ಮೊತ್ತಕ್ಕೆ ಪ್ರೈಂ ವಿಡಿಯೊ ಈ ಸಿನಿಮಾವನ್ನು ಖರೀದಿಸಿದೆ. ಮುಂಬೈನಲ್ಲಿ ನಡೆದ ಕಾರ್ಯಕ್ರಮದಲ್ಲಿ ತಾನು ಖರೀದಿಸಿದ 29 ಸಿನಿಮಾಗಳ ಶೀರ್ಷಿಕೆಯನ್ನು ಪ್ರೈಂ ಘೋಷಿಸಿತು.

ರಿಷಬ್‌ ಶೆಟ್ಟಿ ಹಾಗೂ ಚಿತ್ರದ ನಿರ್ಮಾಪಕ ವಿಜಯ್‌ ಕಿರಗಂದೂರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ವರಾಹ ರೂಪಂ ಹಾಡಿಗೆ ಯಕ್ಷಗಾನ ಕಲಾವಿದರು ಪ್ರದರ್ಶನ ನೀಡಿದ ಬಳಿಕ, ಪ್ರೈಂ ತಂಡವು ‘ಕಾಂತಾರ-ಒಂದು ದಂತಕಥೆ’ ಅಧ್ಯಾಯ 1ರ ಬಿಡುಗಡೆಯನ್ನು ಘೋಷಿಸಿತು. ಸಿನಿಮಾದ ಚಿತ್ರೀಕರಣ ಈಗಾಗಲೇ ಆರಂಭವಾಗಿದ್ದು, ಹೊಸ ಸಿನಿಮಾ ‘ಕಾಂತಾರ-ಒಂದು ದಂತಕಥೆ’ಯ ಪ್ರೀಕ್ವೆಲ್‌ ಆಗಿದ್ದು, ಕದಂಬರ ಕಾಲದಲ್ಲಿ ನಡೆಯುವ ಕಥೆಯನ್ನು ಹೊಂದಿದೆ.

ಬಲ್ಲ ಮಾಹಿತಿಗಳ ಪ್ರಕಾರ ‘ಕಾಂತಾರ’: ಚಾಪ್ಟರ್- 1 ಓಟಿಟಿ ರೈಟ್ಸ್ ಅಂದಾಜು 150 ಕೋಟಿ ರೂ.ಗೆ ಮಾರಾಟವಾಗಿದೆ ಎನ್ನಲಾಗುತ್ತಿದೆ.

Ashitha S

Recent Posts

ಮೆಕ್ಯಾನಿಕ್‌ಗಳ ಬಗ್ಗೆ ಅವಹೇಳ ಹೇಳಿಕೆ : ಝೀ ವಾಹಿನಿ ವಿರುದ್ಧ ಗ್ಯಾರೇಜ್‌ ಮಾಲಿಕರ ಸಂಘ ಆಕ್ರೋಶ

ಇತ್ತೀಚೆಗಷ್ಟೆ ಝೀ ವಾಹಿಯಲ್ಲಿ ಪ್ರಸಾರವಾಗುವ ಮಹಾನಟಿ ಕಾರ್ಯಕ್ರಮದಲ್ಲಿ ಮೆಕ್ಯಾನಿಕ್‌ಗಳ ಬಗ್ಗೆ ಹೇಳಿಕೆ ನೀಡಲಾಗಿತ್ತು ಹಾಗೂ ತೀರ್ಪುಗಾರರ ವಿರುದ್ಧ ಕೇಸ್‌ ಕೂಡ…

3 mins ago

ನನ್ನ ಹೆಸರು ಹೇಳದಿದ್ದರೆ ಕುಮಾರಸ್ವಾಮಿಗೆ ನಿದ್ದೆನೇ ಇಲ್ಲ ಎಂದ ಡಿಕೆ ಶಿವಕುಮಾರ್‌

ನನ್ನ ಹೆಸರು ಹೇಳದಿದ್ದರೆ ಕುಮಾರಸ್ವಾಮಿಗೆ ನಿದ್ದೆಯೇ ಬರುವುದಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಮಾಜಿ ಸಿಎಂ ಹೆಚ್‌ಡಿಕೆ ತಿರುಗೇಟು ನೀಡಿದ್ದಾರೆ.

9 mins ago

ಕುಟುಂಬಸ್ಥರೊಂದಿಗೆ ಈಜು ಕಲಿಯಲು ಹೋದ ಬಾಲಕ ನೀರುಪಾಲು

ಈಜು ಕಲಿಯಲು ಹೋದ ಬಾಲಕ ನೀರುಪಾಲಾಗಿರುವ ಘಟನೆ ರಾಯಚೂರು ತಾಲೂಕಿನ ಹೆಂಬೆರಾಳ ಗ್ರಾಮದಲ್ಲಿ ನಡೆದಿದೆ.

24 mins ago

ಚಾಲಕನ ನಿಯಂತ್ರಣ ತಪ್ಪಿ ಬಟ್ಟೆ ಅಂಗಡಿಗೆ ನುಗ್ಗಿದ ಕಾರು

ಚಾಲಕನ ನಿಯಂತ್ರಣ ತಪ್ಪಿ ಬಟ್ಟೆ ಅಂಗಡಿಗೆ ಕಾರೊಂದು ನುಗ್ಗಿ ಉಲ್ಟಾ ಬಿದ್ದಿರುವ ಘಟನೆ ತೀರ್ಥಹಳ್ಳಿ ಪಟ್ಟಣದ ಗಾಂಧಿ ಚೌಕನಲ್ಲಿ ತಡರಾತ್ರಿ ನಡೆದಿದೆ.

46 mins ago

ಯುವತಿಯರೇ ಎಚ್ಚರ : ಮುಟ್ಟಿನ ನೋವಿಗೆ ಪೈನ್​​ ಕಿಲ್ಲರ್ ಸೇವಿಸಿ ಕೋಮಾಗೆ ಜಾರಿದ ಯುವತಿ

ಮುಟ್ಟಿನ ಸಮಯದಲ್ಲಿ ನೋವು ತಾಳಲಾರದೆ ಅನಿವಾರ್ಯಕ್ಕೆ ಪೈನ್​​ ಕಿಲ್ಲರ್ ಸೇವಿಸುವುದು ಈಗ ಸಾಮನ್ಯವಾಗಿಬಿಟ್ಟಿದೆ. ಕೆಲವರಿಗೆ ಇದರ ಪರಿಣಾಮವು ಅರಿವಾಗಿದೆ. ಆದರೂ…

1 hour ago

ಪೈಲಟ್‌ಗಳ ಸಾಮೂಹಿಕ ರಜೆ : 70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

ಅನಾರೋಗ್ಯದಿಂದ ನೆಪವೊಡ್ಡಿ ಹಿರಿಯ ಪೈಲೆಟ್‌ಗಳು ಸಾಮೂಹಿಕವಾಗಿ ರಜೆಯಲ್ಲಿ ತೆರಳಿರುವ ಪರಿಣಾಮ ಸುಮಾರು 70ಕ್ಕೂ ಅಧಿಕ ಏರ್‌ ಇಂಡಿಯಾ ಎಕ್ಸ್‌ ಪ್ರೆಸ್‌…

1 hour ago