News Karnataka Kannada
Saturday, May 18 2024
ಸಾಂಡಲ್ ವುಡ್

ಕ್ಯಾನ್ಸರ್ ಪೀಡಿತ ಪುಟ್ಟ ಅಭಿಮಾನಿಯ ಆಸೆ ಈಡೇರಿಸಿದ ಕಿಚ್ಚ ಸುದೀಪ್

Kichha sudeep
Photo Credit : Twitter

ಅಭಿನಯ ಚಕ್ರವರ್ತಿ ಸುದೀಪ್ ತೆರೆಮೇಲೆ ಮಾತ್ರವಲ್ಲ ತೆರೆಹಿಂದೆಯೂ ಅವರು ರಿಯಲ್ ಹೀರೋ. ಕಷ್ಟದಲ್ಲಿದ್ದವರಿಗೆ ಜೊತೆಯಾಗಿ ನಿಲ್ಲುವ ಸೂಪರ್ ಸ್ಟಾರ್ ಈಗ ವಿಶೇಷ ಅಭಿಮಾನಿಯನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.

ಕ್ಯಾನ್ಸರ್ ನಿಂದ ಬಳಲುತ್ತಿರುವ ಸಾಕ್ಷಿ ಎಂಬ ಬಾಲಕಿ ಕಿಚ್ಚ ಸುದೀಪ್ ಅಪ್ಪಟ ಅಭಿಮಾನಿ. ಜೀವನದಲ್ಲಿ ಒಮ್ಮೆಯಾದ್ರೂ ತಮ್ಮ ನೆಚ್ಚಿನ ಸ್ಟಾರ್ ಭೇಟಿಯಾಗಬೇಕು ಎಂಬುದು ಸಾಕ್ಷಿ ಆಸೆ. ಬಾಲಕಿಯ ಆಸೆ ಮತ್ತು ಆರೋಗ್ಯ ಸಮಸ್ಯೆ ಬಗ್ಗೆ ತಿಳಿದುಕೊಂಡ ಕಿಚ್ಚ ಸುದೀಪ್ ತನ್ನ ಅಭಿಮಾನಿ ಹಾಗೂ ಅವರ ಕುಟುಂಬಸ್ಥರನ್ನ ಭೇಟಿ ಮಾಡಿದ್ದಾರೆ.

ಬೆಂಗಳೂರಿನ ಶ್ರೀ ಶಂಕರ ಕ್ಯಾನ್ಸರ್ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಾಕ್ಷಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿ, ಪ್ರೀತಿಯಿಂದ ಅಭಿಮಾನಿಗೆ ಅಪ್ಪುಗೆ ಕೊಟ್ಟಿದ್ದಾರೆ.

ಸುದೀಪ್ ಭೇಟಿಯಾದ ಖುಷಿ ಕ್ಷಣಗಳನ್ನು ಹಂಚಿಕೊಂಡಿರುವ ಸಾಕ್ಷಿ, ನನಗೆ ಸುದೀಪ್ ಸರ್ ಇಷ್ಟ. ರನ್ನ ಸಿನಿಮಾದ ಥಿತಲಿ ಹಾಡು ನನಗೆ ಸ್ಪೂರ್ತಿ ಎಂದಿದ್ದಾರೆ. ಕೋಟಿಗೊಬ್ಬನ್ನು ನೋಡಿ ಆ ಪುಟ್ಟ ಅಭಿಮಾನಿಯ ಖುಷಿಗೆ ಪಾರವೇ ಇಲ್ಲ. ಕಿಚ್ಚನ ಈ ಹೃದಯವಂತಿಕೆ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು