ಡಾರ್ಲಿಂಗ್ ಕೃಷ್ಣ ನಟಿಸಿರುವ ‘ಕೌಸಲ್ಯ ಸುಪ್ರಜಾ ರಾಮ’ ಸಿನಿಮಾ ಈಗ ಬಿಡುಗಡೆಗೆ ಸಜ್ಜಾಗಿದೆ. ಈ ಚಿತ್ರದ ರಿಲೀಸ್ ದಿನಾಂಕವನ್ನು ನಿರ್ದೇಶಕ ಶಶಾಂಕ್ ಅವರು ಅನೌನ್ಸ್ ಮಾಡಿದ್ದಾರೆ. ಯಾವುದೇ ಹೈಪ್, ಬಿಲ್ಡಪ್ ಇಲ್ಲದೇ ಅವರು ಬಿಡುಗಡೆ ದಿನಾಂಕವನ್ನು ತಿಳಿಸಿದ್ದಾರೆ. ಜುಲೈ 28ರಂದು ಈ ಚಿತ್ರ ತೆರೆಕಾಣಲಿದೆ. ಶಶಾಂಕ್ ಮತ್ತು ಡಾರ್ಲಿಂಗ್ ಕೃಷ್ಣ ಅವರ ಕಾಂಬಿನೇಷನ್ ಆದ್ದರಿಂದ ಸಿನಿಪ್ರಿಯರಲ್ಲಿ ನಿರೀಕ್ಷೆ ಹೆಚ್ಚಿದೆ.
ಈ ಸಿನಿಮಾದಲ್ಲಿ ಡಾರ್ಲಿಂಗ್ ಕೃಷ್ಣ ಅವರಿಗೆ ಜೋಡಿಯಾಗಿ ಬೃಂದಾ ಆಚಾರ್ಯ ನಟಿಸಿದ್ದಾರೆ. ಈಗಾಗಲೇ ‘ಕೌಸಲ್ಯ ಸುಪ್ರಜಾ ರಾಮ’ ಸಿನಿಮಾದ ಹಾಡುಗಳು ಸೂಪರ್ ಹಿಟ್ ಆಗಿವೆ. ಚಿತ್ರಮಂದಿರದಲ್ಲಿ ಆದಷ್ಟು ಬೇಗ ಈ ಸಿನಿಮಾ ನೋಡಬೇಕು ಎಂದುಕೊಂಡಿದ್ದ ಅಭಿಮಾನಿಗಳು ರಿಲೀಸ್ ಡೇಟ್ ಕೇಳಿ ಖುಷಿಪಟ್ಟಿದ್ದಾರೆ.