News Karnataka Kannada
Thursday, May 02 2024
ಸಾಂಡಲ್ ವುಡ್

ಅಭಿಷೇಕ್ ಅಂಬರೀಶ್- ಅವಿವಾ ಬಿದ್ದಪ್ಪ ವಿವಾಹ ಮಹೋತ್ಸವದಲ್ಲಿ ಪಾಲ್ಗೊಂಡ ಎಂ.ಬಿ.ಪಾಟೀಲ

M.B. Patil attends Abhishek Ambareesh-Aviva Biddappa's wedding ceremony
Photo Credit : News Kannada

ವಿಜಯಪುರ: ರಾಜಧಾನಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಮೇ 5 ರಂದು ನಡೆದ ಕನ್ನಡದ ಖ್ಯಾತ ನಟ ದಿ. ರೆಬಲ್ ಸ್ಟಾರ್ ಅಂಬರೀಷ್ ಅವರ ಪುತ್ರ ಅಭಿಷೇಕ್ ಅಂಬರೀಶ್ ಅವರ ವಿವಾಹ ಮಹೋತ್ಸವದಲ್ಲಿ ಅಂಬರೀಶ್ ಅವರ ಪರಮಾಪ್ತ ಗೆಳೆಯರೊಬ್ಬರಾದ ಜಿಲ್ಲೆಯ ಬಬಲೇಶ್ವರ ಶಾಸಕ ಹಾಗೂ ಸಚಿವ, ಎಂ.ಬಿ.ಪಾಟೀಲ ಅವರು ಪಾಲ್ಗೊಂಡು ವಧು-ವರರಿಗೆ ಶುಭಾಶಯ ಕೋರಿದರು.

ಜ್ಯೂನಿಯರ್‌ ರೆಬಲ್‌ ಸ್ಟಾರ್‌ ಎಂದೇ ಕರೆಸಿಕೊಳ್ಳುವ ದಿವಂಗತ ನಟ ರೆಬಲ್ ಸ್ಟಾರ್ ಅಂಬರೀಶ್ ಅವರ ಪುತ್ರ ಅಭಿಷೇಕ್‌ ಅಂಬರೀಶ್‌ ಅವರು ಅವಿವಾ ಬಿದ್ದಪ್ಪ ಅವರೊಂದಿಗೆ ಮೇ 5ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟರು.

ಬೆಂಗಳೂರಿನ ಅರಮನೆ ಮೈದಾನದಲ್ಲಿ ಒಕ್ಕಲಿಗ ಸಂಪ್ರದಾಯದಂತೆ ನಡೆದ ಮದುವೆ ಕಾರ್ಯಕ್ರಮದಲ್ಲಿ ಅವಿವಾಗೆ ಮಾಂಗಲ್ಯ ಧಾರಣೆ ಮಾಡುವ ಮೂಲಕ ಅಭಿಷೇಕ್‌ ದೀರ್ಘಕಾಲದ ಗೆಳತಿಯೊಂದಿಗೆ ಹಸೆಮಣೆ ಏರಿದರು.

ಈ ಸಂದರ್ಭದಲ್ಲಿ ಮಾಜಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಸೂಪರ್ ಸ್ಟಾರ್ ರಜನಿಕಾಂತ್, ತೆಲುಗು ನಟ ಮೋಹನ್ ಬಾಬು, ಕ್ರಿಕೆಟಿಗ ಅನಿಲ್ ಕುಂಬ್ಳೆ ಸೇರಿದಂತೆ ಹಲವು ಗಣ್ಯರು ಆಗಮಿಸಿ ನವ ದಂಪತಿಗೆ ಶುಭ ಹಾರೈಸಿದರು.

ಮೇ 5 ರಂದು ನಡೆದ ಈ ಸಮಾರಂಭದಲ್ಲಿ ಸ್ನೇಹಿತರು ಮತ್ತು ಕುಟುಂಬದ ಆಪ್ತರು ಮಾತ್ರ ಭಾಗವಹಿಸಿದ್ದರು.

ಜೂನ್ 7ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿರುವ ತ್ರಿಪುರ ವಾಸಿನಿಯಲ್ಲಿ ಅದ್ದೂರಿಯಾಗಿ ಆರತಕ್ಷತೆ ಕಾರ್ಯಕ್ರಮ ನಡೆಯಲಿದ್ದು, ಚಿತ್ರರಂಗದ ಗಣ್ಯರು ಸೇರಿದಂತೆ ರಾಜಕೀಯ ಮುಖಂಡರು ಭಾಗವಹಿಸಲಿದ್ದಾರೆ.

ಸದ್ಯ ಸೂರಿ ಅವರ ನಿರ್ದೇಶನದ ‘ಬ್ಯಾಡ್ ಮ್ಯಾನರ್ಸ್’ ಚಿತ್ರದಲ್ಲಿ ಅಭಿಷೇಕ್ ಅಭಿನಯಿಸುತ್ತಿದ್ದಾರೆ. ಅಭಿಷೇಕ್‌ಗೆ ರಚಿತಾ ರಾಮ್ ಮತ್ತು ಪ್ರಿಯಾಂಕ ನಾಯಕಿಯರಾಗಿ ನಟಿಸಿದ್ದಾರೆ. ಹ್ಯಾಪಿ ಮ್ಯಾರೀಡ್ ಲೈಫ್ ಜೂನಿಯರ್ ರೆಬಲ್ ಸ್ಟಾರ್…

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು