ಬೆಂಗಳೂರು: ನಟಿ ಶ್ರುತಿ ಹರಿಹರನ್ ಮೀಟೂ ಕೇಸ್ ಗೆ ಮತ್ತೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ನಟ ಅರ್ಜುನ್ ಸರ್ಜಾ ಕೇಸ್ ಗೆ ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್ ಪ್ರಶ್ನಿಸಿದ್ದ ಶ್ರುತಿ ಹರಿಹರನ್ ಗೆ ಕೋರ್ಟ್ ನೋಟೀಸ್ ಜಾರಿ ಮಾಡಿದೆ.
ಬೆಂಗಳೂರಿನ 8ನೇ ಎಸಿಎಂಎಂ ನ್ಯಾಯಾಲಯ ನಟಿ ಶ್ರುತಿ ಹರಿಹರನ್ ಗೆ ನೋಟೀಸ್ ಜಾರಿ ಮಾಡಿದೆ. ಅಲ್ಲದೇ ಪ್ರಕರಣ ಸಂಬಂಧ ಪೊಲೀಸರಿಗೂ ಸೂಕ್ತ ಸಾಕ್ಷ್ಯಾಧಾರ ನೀಡುವಂತೆ ಸೂಚಿಸಿದೆ. 2018 ರಲ್ಲಿ ಅರ್ಜುನ್ ಸರ್ಜಾ ವಿರುದ್ಧ ಮೀಟೂ ಆರೋಪ ಮಾಡಿದ್ದ ನಟಿ ನಟಿ ಶ್ರುತಿ ಹರಿಹರನ್ ದೊಡ್ಡಮಟ್ಟದಲ್ಲಿ ಸುದ್ದಿಯಾಗಿದ್ದರು. ಚಿತ್ರವೊಂದರ ಶೂಟಿಂಗ್ ವೇಳೆ ಅರ್ಜುನ್ ಸರ್ಜಾ ಅವರು ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವುದಾಗಿ ನಟಿ ಆರೋಪಿಸಿದ್ದರು. ಪೊಲೀಸರು ಅರ್ಜುನ್ ಸರ್ಜಾ ವಿರುದ್ಧ ಸಾಕ್ಷ್ಯಾಧಾರ ಇಲ್ಲ ಅಂತ ಬಿ ರಿಪೋರ್ಟ್ ಸಲ್ಲಿಸಿದ್ದರು. ಪೊಲೀಸರ ಬಿ ರಿಪೋರ್ಟ್ ಚಾಲೆಂಜ್ ಮಾಡಿದ್ದ ಶೃತಿ ಹರಿಹರನ್ಗೆ ಈಗ ನೋಟಿಸ್ ಸಿಕ್ಕಿದೆ. ಅರ್ಜಿ ವಿಚಾರಣೆಯ ಬಳಿಕ ಶ್ರುತಿಗೆ ಪೊಲೀಸರು ನೋಟಿಸ್ ನೀಡಿದ್ದು, ಆರೋಪಕ್ಕೆ ಸಂಬಂಧಿಸಿದ ಸಾಕ್ಷ್ಯಾಧಾರಗಳನ್ನು ನೀಡುವಂತೆ ನೋಟಿಸ್ನಲ್ಲಿ ತಿಳಿಸಲಾಗಿದೆ.