ಸಾಂಡಲ್ ವುಡ್

ಸಾಹಿತ್ಯ ಆಧರಿಸಿ ಸಿನಿಮಾ ಮಾಡಲು ಮುಂದಾದ ಅಶ್ವಿನಿ ಪುನೀತ್ ರಾಜ್ ಕುಮಾರ್

ಬೆಂಗಳೂರು: ‘ಪವರ್ ಸ್ಟಾರ್’ ಪುನೀತ್ ರಾಜ್ ಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರು ಕನ್ನಡ ಸಾಹಿತ್ಯ ಆಧರಿಸಿ ಸಿನಿಮಾಗಳನ್ನು ಮಾಡಲು ಯೋಚಿಸುತ್ತಿರುವುದಾಗಿ ಹೇಳಿದ್ದಾರೆ.

ಈ ಮೂಲಕ ಕನ್ನಡ ಚಿತ್ರರಂಗದ ಅಪ್ರತಿಮ ನಿರ್ಮಾಪಕಿ, ತಮ್ಮ ಅತ್ತೆ ಪಾರ್ವತಮ್ಮ ರಾಜ್ ಕುಮಾರ್ ಅವರ ಹಾದಿಯಲ್ಲೇ ಸಾಗುತ್ತಿದ್ದಾರೆ. ಪಾರ್ವತಮ್ಮ ರಾಜ್ಕುಮಾರ್ ಅವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಬಹಳ ಆಸಕ್ತಿ ಇತ್ತು. ಅವರು ತಾವು ಓದಿದ ಕಾದಂಬರಿಯನ್ನು ಇಟ್ಟುಕೊಂಡು ಅವರು ಸಿನಿಮಾ ಮಾಡುತ್ತಿದ್ದರು. ಇದೀಗ ಅಶ್ವಿನಿ ಅವರು ಸಹ ಕನ್ನಡ ಸಾಹಿತ್ಯದ ಮೂಲಕ ತಮ್ಮ ಚಿತ್ರಗಳಿಗೆ ಜೀವ ತುಂಬುವತ್ತ ಗಮನಹರಿಸಿದ್ದಾರೆ.

ಹೊಸಬರಿಗೆ ಅವಕಾಶ ನೀಡಬೇಕು ಎಂಬ ಕಾರಣದಿಂದ ಪುನೀತ್​ ರಾಜ್​ಕುಮಾರ್​ ಅವರು ‘ಪಿಆರ್​ಕೆ ಪ್ರೊಡಕ್ಷನ್ಸ್​’ ಸಂಸ್ಥೆ ಆರಂಭಿಸಿದರು. ಈಗ ಅದನ್ನು ಅಶ್ವಿನಿ ಪುನೀತ್ ರಾಜ್​ಕುಮಾರ್​ ಅವರು ಮುಂದುವರಿಸಿಕೊಂಡು ಹೋಗುತ್ತಿದ್ದಾರೆ.  ಕಾದಂಬರಿ ಆಧರಿಸಿದ ಸಿನಿಮಾಗಳನ್ನು ನಿರ್ಮಾಣ ಮಾಡಬೇಕು ಎನ್ನುವುದು ಅಶ್ವಿನಿ ಅವರಿಗೂ ಆಸೆಯಂತೆ. ಹಾಗಾಗಿ ಅವರು ಕೂಡ ಪುಸ್ತಕ ಓದಲು ಶುರು ಮಾಡಿದ್ದಾರೆ. ಈಗಾಗಲೇ ಒಂದು ಕಾದಂಬರಿಯನ್ನು ಅವರು ಓದುತ್ತಿದ್ದಾರಂತೆ.

ಹೊಸ ನಿರ್ದೇಶಕರಿಗೆ, ಕಲಾವಿದರಿಗೆ ತಮ್ಮ ಬ್ಯಾನರ್ ನಲ್ಲಿ ಸಿನಿಮಾ ಮಾಡಬೇಕು ಎನ್ನುವುದು ಪುನೀತ್ ಅವರ ಗುರಿಯಾಗಿತ್ತು. ಅದನ್ನು ಅವರು ಚಾಚೂ ತಪ್ಪದೇ ಮಾಡುತ್ತಿದ್ದರು. ಪುನೀತ್ ಅವರು ಕಾಲವಾದನಂತರ ಅವರ ಕನಸನ್ನು ಪತ್ನಿ ಅಶ್ವಿನಿ ಮುಂದುವರೆಸಿಕೊಂಡು ಹೋಗುತ್ತಿದ್ದಾರೆ. ಹೊಸಬರಿಗೆ, ಅದರಲ್ಲೂ ಮಹಿಳಾ ನಿರ್ದೇಶಕಿಯರಿಗೆ ಹೆಚ್ಚು ಅವಕಾಶ ನೀಡುವುದಾಗಿ ಹೇಳಿಕೊಂಡಿದ್ದಾರೆ.

ಮೊದಲಿನಿಂದಲೂ ಪುಸ್ತಕಗಳನ್ನು ಓದುವ ಹವ್ಯಾಸವಿತ್ತು. ಇದೀಗ ಸಿನಿಮಾಗಾಗಿ ಹೊಸ ಹೊಸ ಕಾದಂಬರಿಗಳನ್ನು ಓದುತ್ತಿದ್ದೇನೆ. ಈಗ ಸಿನಿಮಾವಾಗುವಂತಹ ಒಂದು ಕಾದಂಬರಿ ಓದುತ್ತಿದ್ದೇನೆ. ಮುಂದಿನ ದಿನಗಳಲ್ಲಿ ಅದು ಯಾವುದು? ಯಾರ ಕಾದಂಬರಿ ಎನ್ನುವ ಕುರಿತು ಮಾತನಾಡುತ್ತೇನೆ ಎಂದಿದ್ದಾರೆ ಅಶ್ವಿನಿ.

Ashitha S

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

6 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

7 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

8 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

8 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

8 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

8 hours ago