ಮೈಸೂರು: ವಿಷ್ಣುವರ್ಧನ್ ಸ್ಮಾರಕ ಉದ್ಘಾಟನೆಗೆ ಕಾಲ ಕೂಡಿ ಬಂತು!

ಮೈಸೂರು: ಎಚ್.ಡಿ.ಕೋಟೆ ತಾಲೂಕಿನ ಹಾಲಾಳು ಗ್ರಾಮದಲ್ಲಿ ಐದು ಎಕರೆ ಪ್ರದೇಶದಲ್ಲಿ ತಲೆ ಎತ್ತಿರುವ ಸಾಹಸಸಿಂಹ ಡಾ.ವಿಷ್ಣುವರ್ಧನ್ ಅವರ ಭವ್ಯ ಸ್ಮಾರಕ ಲೋಕಾರ್ಪಣೆಗೊಳ್ಳುವ ಕಾಲ 13 ವರ್ಷಗಳ ಬಳಿಕ ಸನ್ನಿಹಿತವಾಗಿದೆ.

ಇತ್ತೀಚೆಗೆ ಬೆಂಗಳೂರಿನಲ್ಲಿ ಭಾರತಿ ವಿಷ್ಣುವರ್ಧನ್ ಅವರ ನವೀಕೃತ ಮನೆಯ ಗೃಹಪ್ರವೇಶಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ವಿಷ್ಣು ಸ್ಮಾರಕವನ್ನು ಶೀಘ್ರವೇ ಲೋಕಾರ್ಪಣೆಗೊಳಿಸುವ ಇಂಗಿತ ವ್ಯಕ್ತಪಡಿಸಿದ್ದರು. ಅದರಂತೆ ಡಿ.18ರಂದು ಸ್ಮಾರಕವನ್ನು ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ ಅವರು ಲೋಕಾರ್ಪಣೆಗೊಳಿಸಲಿದ್ದಾರೆ.

2009ರ ಡಿ.30ರಂದು ಮೈಸೂರಿನಲ್ಲಿ ದಿಢೀರ್ ಆಗಿ ಮೃತಪಟ್ಟಿದ್ದರು. ಬೆಂಗಳೂರಿನ ಅಭಿಮಾನ್ ಸ್ಟುಡಿಯೋದಲ್ಲಿ ಅವರ ಅಂತ್ಯಸಂಸ್ಕಾರ ನಡೆದರೂ ನಾನಾ ಕಾರಣಗಳಿಂದಾಗಿ ಅಲ್ಲಿ ಸ್ಮಾರಕ ನಿರ್ಮಿಸುವ ಕೆಲಸ ಕೈಗೂಡಲಿಲ್ಲ. ಆ ನಂತರ 2016ರಲ್ಲಿ ಭಾರತಿ ಅವರ ಮನವಿಗೆ ಸ್ಪಂದಿಸಿದ ಅಂದಿನ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಎಚ್.ಡಿ.ಕೋಟೆ ತಾಲೂಕಿನ ಹಾಲಾಳು ಗ್ರಾಮದಲ್ಲಿ ಐದು ಎಕರೆ ಜಮೀನು ಮಂಜೂರು ಮಾಡಿದರು. ಮೈಸೂರು ಜಿಲ್ಲಾಡಳಿತ ಭೂ ಮಂಜೂರಾತಿಯನ್ನು ಅಂತಿಮಗೊಳಿಸಿತು. 2019 ರಲ್ಲಿ ಯಡಿಯೂರಪ್ಪ ಸರಕಾರ ಡಾ.ವಿಷ್ಣುವರ್ಧನ್ ಪ್ರತಿಷ್ಠಾನಕ್ಕೆ 11 ಕೋಟಿ ರೂ. ಅನುದಾನ ಬಿಡುಗಡೆಗೊಳಿಸುವ ಕಾಮಗಾರಿಗೆ ಚಾಲನೆ ನೀಡಿತು.

ದಿಲ್ಲಿಯ ರಾಜಪಥದಲ್ಲಿ ಇತ್ತೀಚೆಗೆ ಅನಾವರಣಗೊಂಡ ನೇತಾಜಿ ಪ್ರತಿಮೆಯ ರೂವಾರಿ, ಮೈಸೂರಿನ ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್ ಅವರ ಕೆತ್ತನೆಯಲ್ಲಿ ಆರು ಅಡಿ ಎತ್ತರದ ವಿಷ್ಣು ಪ್ರತಿಮೆ ಪ್ರತಿಷ್ಠಾಪನೆ ಮಾಡಲಾಗಿದೆ. ಎರಡು ಎಕರೆಯಲ್ಲಿ ಸ್ಮಾರಕ, ಮಲ್ಟಿಫ್ಲೆಕ್ಸ್ ಚಿತ್ರಮಂದಿರ ಮಾದರಿಯಲ್ಲಿ ಹವಾನಿಯಂತ್ರಿತ ಥಿಯೇಟರ್, ಪುರುಷ- ಮತ್ತು ಮಹಿಳಾ ಕಲಾವಿದರ ಡ್ರೆಸ್ಸಿಂಗ್ ಕೊಠಡಿ, ಸುಸಜ್ಜಿತ ಶೌಚಾಲಯ, ವಿಶಾಲವಾದ ವಾಹನ ಪಾರ್ಕಿಂಗ್ ವ್ಯವಸ್ಥೆಯನ್ನು ಪ್ರತಿಷ್ಠಾನ ಅಭಿವೃದ್ಧಿಪಡಿಸಲಿದೆ. ಮುಂಭಾಗ ಸುಂದರವಾದ ಕಾರಂಜಿ ನಿರ್ಮಾಣವಾಗಲಿದ್ದು ಸ್ಮಾರಕದ ಹೊರ ಆವರಣದಲ್ಲಿ ಸಸ್ಯೋದ್ಯಾನ ನಿರ್ಮಿಸಿ ವಿವಿಧ ಪ್ರಭೇದದ ಹೂವಿನ ಗಿಡಗಳನ್ನು ವೃತ್ತಾಕಾರದಲ್ಲಿ ನೆಟ್ಟು ಬೆಳೆಸಲಾಗುತ್ತಿದೆ.

ವಿಷ್ಣು ಸ್ಮಾರಕಕ್ಕಾಗಿ ಸರ್ಕಾರ ಸುಮಾರು 11 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದು 2021ರಿಂದ ಕಾಮಗಾರಿ ಕೆಲಸ ಆರಂಭವಾಗಿದೆ. ಬೆಂಗಳೂರಿನ ಎಂ.9 ಕಂಪೆನಿಯ ನಿಶ್ಚಲ್ ಸ್ಮಾರಕದ ರೂಪುರೇಷೆ ಸಿದ್ಧಪಡಿಸಿದ್ದಾರೆ. ಕೃಷ್ಣ ಶಿಲೆಯಲ್ಲಿ ಕೆತ್ತಲಾದ ವಿಷ್ಣುವಿನ ಪ್ರತಿಮೆ ಸುತ್ತಲೂ ವೃತ್ತಾಕಾರದ ಫೋಟೋ ಗ್ಯಾಲರಿ, ಗ್ಯಾಲರಿಯ ಇಬ್ಬದಿಯಲ್ಲಿಯೂ ವಿಷ್ಣುವರ್ಧನ್ ಅಭಿನಯದ ಸಿನಿಮಾಗಳ ಡಿಜಿಟಲ್ ಪೋಸ್ಟರ್ ಪ್ರದರ್ಶನ ಇರಲಿದೆ.

ಪೊಲೀಸ್ ವಸತಿ ಮೂಲಭೂತ ಸೌಕರ್ಯಗಳ ನಿಗಮಕ್ಕೆ ಈ ನಿರ್ಮಾಣದ ಟೆಂಡರ್ ನೀಡಲಾಗಿದ್ದು ಸರಕಾರ ಈಗಾಗಲೇ ರೂ.10 ಕೋಟಿ ರೂ. ಹಣ ಬಿಡುಗಡೆ ಮಾಡಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಅಧೀನದಲ್ಲಿ ಡಾ.ವಿಷ್ಣುವರ್ಧನ್ ಪ್ರತಿಷ್ಠಾನ ಇದರ ಉಸ್ತುವಾರಿ ವಹಿಸಿಕೊಳ್ಳಲಿದೆ.

Sneha Gowda

Recent Posts

ಅಶ್ಲೀಲ‌ ವಿಡಿಯೋ ಕೇಸ್: ಮೂಡಿಗೆರೆಯಲ್ಲಿ ಪ್ರಜ್ವಲ್ ಬಂಧನ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಹಗರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ಪೊಲೀಸರು ಪ್ರಜ್ವಲ್ ನನ್ನು ಬಂಧಿಸಿದ್ದಾರೆ.

13 mins ago

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿಯ ಶವ ಪತ್ತೆ

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿ ಪ್ರಕಾಶ್‌ ಶವವಾಗಿ ಪತ್ತೆಯಾಗಿದ್ದಾನೆ.

22 mins ago

ದಾಭೋಲ್ಕರ ಹತ್ಯೆ ಕೇಸ್ ನಲ್ಲಿ ಸನಾತನ ಸಂಸ್ಥೆಯ ನಿರಪರಾಧಿತನ ಸಾಬೀತು; ಸನಾತನ ಸಂಸ್ಥೆ ಸಂತಸ

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಣೆಯ ವಿಶೇಷ ನ್ಯಾಯಾಲಯ ಇಂದು ಇಬ್ಬರು ಆರೋಪಿಗಳನ್ನು ತಪ್ಪಿತಸ್ಥರೆಂದು ಪರಿಗಣಿಸಿ…

22 mins ago

ಕೊಲ್ಲೂರು ಪುಣ್ಯ ನದಿಗಳ ಮಾಲಿನ್ಯ: ಅರ್ಜಿ ವಿಚಾರಣೆಗೆ ಹಸಿರು ಪೀಠ ಅಂಗೀಕಾರ

ದಕ್ಷಿಣ ಭಾರತದ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಕೊಲ್ಲೂರಿನ ಪುಣ್ಯ ನದಿಗಳನ್ನು ಮಾಲಿನ್ಯಗೊಳಿಸುತ್ತಿರುವ, ಪರಿಸರ ನಾಶಗೊಳಿಸುತ್ತಿರುವ ಹಾಗೂ ಸರ್ಕಾರಿ ಭೂಮಿಗಳ ಅತಿಕ್ರಮಣದ…

37 mins ago

ಪ್ರವೀಣ್ ನೆಟ್ಟಾರು ಹತ್ಯೆ ಕೇಸ್; ಪ್ರಮುಖ ಆರೋಪಿ ಬಂಧನಕ್ಕೆ ಪತ್ನಿ ನೂತನ ಸಂತಸ

ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಮುಸ್ತಫಾ ಪೈಚಾರನ್ನ ಎನ್‌ಐಎ ಅಧಿಕಾರಿಗಳು ಬಂಧಿಸಿದ್ದು, ಮುಸ್ತಫಾ…

43 mins ago

ಮೊದಲ ಬಾರಿಗೆ ಮರಾಠಿ ಭಾಷೆಯಲ್ಲಿ ಯಕ್ಷಗಾನ ಪ್ರದರ್ಶನ

ಕನ್ನಡದ ಹೆಮ್ಮೆಯ ಕಲೆ ಯಕ್ಷಗಾನ ಇದೀಗ ಗಡಿಗಳನ್ನು ದಾಟಿ ಮಹಾರಾಷ್ಟ್ರದ ಕಡೆಗೆ ಪಯಣ ಬೆಳೆಸಿದೆ. ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ…

55 mins ago