ಹುಟ್ಟುಹಬ್ಬದ ಸಂಭ್ರಮದಲ್ಲಿ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್

ಸ್ಯಾಂಡಲ್‍ವುಡ್ ನಟ ದೇವರಾಜ್ ಪುತ್ರ, ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಇಂದು ತಮ್ಮ 36ನೇ ವರ್ಷದ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ನಾಯಕನಿಗೆ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ. ಇನ್ನು  ಐದು ವರ್ಷಗಳ ಬಳಿಕ ಪ್ರಜ್ವಲ್ ದೇವರಾಜ್ ಅವರು ಅಭಿಮಾನಿಗಳ ಜೊತೆ ಬರ್ತ್​ಡೇ ಆಚರಿಸಿಕೊಳ್ಳುತ್ತಿದ್ದಾರೆ.  ಈ ಕಾರಣಕ್ಕೆ ಪ್ರಜ್ವಲ್ ಮನೆ ಸಮೀಪ ಭರ್ಜರಿ ಸಿದ್ಧತೆ ಮಾಡಲಾಗಿದೆ. ಫ್ಯಾನ್ಸ್​ನ ಸ್ವಾಗತಿಸಲು ಸಕಲ ರೀತಿಯಲ್ಲಿ ತಯಾರಿ ಮಾಡಿಕೊಳ್ಳಲಾಗಿದೆ.

ಪ್ರಜ್ವಲ್ ದೇವರಾಜ್ ಅವರು ಜನಿಸಿದ್ದು 4 ಜುಲೈ 1987 ಬೆಂಗಳೂರಿನಲ್ಲಿ. ತಂದೆ ದೇವರಾಜ್, ತಾಯಿ ಚಂದ್ರಲೇಖಾ. ತಮ್ಮ ಪ್ರಣಮ್ ದೇವರಾಜ್. ಇವರ ಪತ್ನಿ ರಾಗಿಣಿ. ಇವರು ಸಿನಿಮಾ ಮಾಡ್ತಾ ಇದ್ದಾರೆ. ಪ್ರಜ್ವಲ್ ದೇವರಾಜ್ 2007 ರಲ್ಲಿ ಬಿಡುಗಡೆಯಾದ ಸಿಕ್ಸರ್ ಚಿತ್ರದ ಮೂಲಕ ನಾಯಕನಾಗಿ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ನೀಡಿದ್ದಾರೆ. ನಂತರ ಗೆಳೆಯ ಚಿತ್ರವು ಕನ್ನಡ ಚಿತ್ರರಂಗದ ಬಾಕ್ಸ್ ಆಫೀಸ್ ನಲ್ಲಿ ಸದ್ದು ಮಾಡಿತ್ತು. ಬಳಿಕ ಆನೇಕ ಚಿತ್ರಗಳಲ್ಲಿ ತಮ್ಮ ಅದ್ಭುತ ನಟನೆ ಮೂಲಕ ಅಭಿಮಾನಿಗಳಿಗೆ ಹತ್ತಿರವಾಗಿದ್ದಾರೆ. ಸದ್ಯ ಪ್ರಜ್ವಲ್ ದೇವರಾಜ್ ಗಣ ಎಂಬ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಇವರ ಹುಟ್ಟುಹಬ್ಬದ ಪ್ರಯುಕ್ತ ಗಣ ಸಿನಿಮಾದ ಟೀಸರ್ ಬಿಡುಗಡೆ ಮಾಡಿದ್ದಾರೆ. ಟೀಸರ್ ನೋಡಿದ ಫ್ಯಾನ್ಸ್ ಮೆಚ್ಚಿಕೊಂಡಿದ್ದಾರೆ.

 

Ashitha S

Recent Posts

ಅಧಿಕಾರಿಗಳಿಂದಲೇ ಕಾಂಗ್ರೆಸ್ ಪಕ್ಷಕ್ಕೆ ಮತದಾನದ ಆರೋಪ: ಸ್ಥಳಕ್ಕೆ ಉಮೇಶ ಜಾಧವ್ ಭೇಟಿ

ಇಲ್ಲಿನ ಕಲಬುರಗಿ ಉತ್ತರ ಮತಕ್ಷೇತ್ರದ ನ್ಯೂ ರಾಘವೇಂದ್ರ ಕಾಲೋನಿಯ ಬೂತ್ ಸಂಖ್ಯೆ 181 ರಲ್ಲಿ ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ…

3 hours ago

ಅತನೂರ ಗ್ರಾಮದಲ್ಲಿ ಸರ್ವಧರ್ಮಗಳ ಆರಾಧ್ಯದೈವ ನಂದಿ ಬಸವನ ಜಾತ್ರೆಯ ಸಡಗರ

ಅಫಜಲಪುರ ತಾಲೂಕಿನ ಅತನೂರ ಗ್ರಾಮದಲ್ಲಿ ಗ್ರಾಮದೇವ ನಂದಿ ಬಸವೇಶ್ವರ ಜಾತ್ರೆಯು ಸಡಗರದಿಂದ ನಡೆಯಲಿದೆ ಎಂದು ದೇವಸ್ಥಾನ ಮಂಡಳಿಯ ಸದಸ್ಯರು ತಿಳಿಸಿದರು.

3 hours ago

ಪ್ರೀತಿಸಿ ಮದುವೆಯಾದ ಅನ್ಯಕೋಮಿನ ಜೋಡಿ: ಹಿಂದೂ ಪರ ಸಂಘಟನೆಗಳಿಂದ ಪ್ರತಿಭಟನೆ

ಮುಸ್ಲಿಂ ಯುವತಿ ಬಾದಾಮಿ ಮೂಲದ ರುಬಿನಾ ಹಾಗೂ ಹಿಂದೂ ಯುವಕ ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ‌ ಮದುವೆಯಾಗಿ ರಕ್ಷಣೆ ಕೋರಿ ಬಾಗಲಕೋಟೆ…

3 hours ago

ಮೆಲ್ಬೋರ್ನ್‌ನಲ್ಲಿ ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಹತ್ಯೆ

ಆಸ್ಟ್ರೇಲಿಯಾದ ಮೆಲ್ಬೋರ್ನ್‌ನಲ್ಲಿ  ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ನಡೆದಿದೆ.

4 hours ago

ಮಾದಪ್ಪನ ಸನ್ನಿಧಿಯಲ್ಲಿ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಸೋಮವಾರ ಮಾದಪ್ಪನಿಗೆ ಎಣ್ಣೆ ಮಜ್ಜನ ಸೇವೆ ನಡೆಯಿತು. ಎಣ್ಣೆ ಮಜ್ಜನ ಸೇವೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮಾದಪ್ಪನ ದರ್ಶನ ಪಡೆದು…

4 hours ago

ಅಕ್ಷಯ ತೃತೀಯದಂದು ಬಾಲ್ಯವಿವಾಹ ನಡೆಯದಂತೆ ಕ್ರಮ

ಮೇ 10 ರಂದುಬಸವ ಜಯಂತಿ ಹಾಗೂ ಅಕ್ಷಯ ತೃತೀಯ ದಿನವಾದ ಕಾರಣ ಈ ಸಂದರ್ಭದಲ್ಲಿ ವೈಯಕ್ತಿಕ ವಿವಾಹಗಳು ಹಾಗೂ ಸಾಮೂಹಿಕ…

4 hours ago