ಸಾಂಡಲ್ ವುಡ್

ಕಿಚ್ಚ ಸುದೀಪ್ ನಿವಾಸ ಮುಂದೆ ಧರಣಿ ನಿಲ್ಲುವುದಾಗಿ ನಿರ್ಮಾಪಕರ ಎಚ್ಚರಿಕೆ

ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ತಮಗೆ ಕೊಟ್ಟಿರುವ ಮಾತನ್ನು ಈಡೇರಿಸದಿದ್ದರೆ ಅವರ ಮನೆ ಮುಂದೆ ಧರಣಿ ನಡೆಸುವುದಾಗಿ ಸ್ಯಾಂಡಲ್ ವುಡ್ ನಿರ್ಮಾಪಕ ಕೆಸಿಎನ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ.

ಈ ಮಧ್ಯೆ ವಿವಾದಕ್ಕೆ ಸಂಬಂಧಿಸಿ ನಟ ಸುದೀಪ್ ಒಂದೂವರೆ ತಿಂಗಳ ಹಿಂದೆ ತಮ್ಮ ವಕೀಲರ ಮೂಲಕ ಫಿಲ್ಮ್ ಚೇಂಬರ್ಗೆ ಪ್ರತಿಕ್ರಿಯಿಸಿ, ಕುಮಾರ್ ಅವರು ಆರೋಪಿಸಿರುವಂತೆ ಮಾಡಿರುವ ಹಣಕಾಸಿನ ವಹಿವಾಟಿನ ಬಗ್ಗೆ ಪುರಾವೆ ನೀಡುವಂತೆ ಕೇಳಿದ್ದರು ಎಂದು ತಿಳಿದುಬಂದಿದೆ. ಸ್ಯಾಂಡಲ್ ವುಡ್ ನಿರ್ಮಾಪಕ ಕೆ ಸಿ ಎನ್ ಕುಮಾರ್ ಏಳು ವರ್ಷಗಳ ಹಿಂದೆ ಕಿಚ್ಚ ಸುದೀಪ್ ಜೊತೆ ಮಾಡಿಕೊಂಡಿರುವ ಅಗ್ರಿಮೆಂಟ್ ನಂತೆ ಚಿತ್ರ ಮಾಡಿ ಕೊಟ್ಟಿರುವ ಮಾತು ಈಡೇರಿಸದಿದ್ದರೆ ಸುದೀಪ್ ಅವರ ನಿವಾಸ ಅಥವಾ ಶೂಟಿಂಗ್ ಸ್ಥಳದಲ್ಲಿ ಧರಣಿ ನಡೆಸುವುದಾಗಿ ಕುಮಾರ್ ಎಚ್ಚರಿಕೆ ಹಾಕಿದ್ದಾರೆ.

ಅಲ್ಲದೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಕಳೆದ ದಿನ ಪತ್ರಿಕಾಗೋಷ್ಠಿ ಕರೆದು ಕುಮಾರ್ ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ. ವಿಕ್ರಾಂತ್ ರೋಣ ಚಿತ್ರದ ಬಿಡುಗಡೆಯ ನಂತರ ತಮ್ಮ ಪ್ರಾಜೆಕ್ಟ್ ಮಾಡಬೇಕಾಗಿತ್ತು. ಆದರೆ ಅವರು ಈಗ ಬೇರೆ ಚಿತ್ರ ಒಪ್ಪಿಕೊಂಡಿದ್ದು ಇದರಿಂದ ನಮಗೆ ಬಹಳ ನಷ್ಟವಾಗುತ್ತಿದೆ. ಸುದೀಪ್ ಅವರನ್ನು ಭೇಟಿ ಮಾಡಲು ಹಲವು ಬಾರಿ ಪ್ರಯತ್ನಿಸಿದ್ದೆ, ಆದರೆ ಅವರು ನನ್ನ ಫೋನ್ ಕರೆಗಳಿಗೆ ಪ್ರತಿಕ್ರಿಯಿಸಲಿಲ್ಲ ಎಂದು ಹೇಳಿದ್ದಾರೆ

Ashitha S

Recent Posts

ಆರ್‌ಸಿಬಿ ಸಿಎಸ್‌ಕೆ ಹೈವೋಲ್ಟೇಜ್ ಪಂದ್ಯ: ಸೈಬರ್‌ ಖದೀಮರಿಂದ ವಂಚನೆ

ಇಂದು ಚಿನ್ನಸ್ವಾಮಿಯಲ್ಲಿ ನಡೆಯಲಿರುವ ಹೈವೋಲ್ಟೇಜ್ ಪಂದ್ಯದ ಟಿಕೆಟ್ ಈಗಾಗಲೇ ಸೋಲ್ಡ್ ಔಟ್ ಆಗಿದೆ. ಆದರೆ ಈ ಪಂದ್ಯದ ಟಿಕೆಟ್‌ ನೀಡುತ್ತೇವೆ…

16 mins ago

ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು ಮುಂದಾದ ಸರಕಾರ

ಪಂಚ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವುದು ಸರಕಾರಕ್ಕೆ ಸವಾಲಾಗಿದ್ದು, ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು…

32 mins ago

ಬಹುಭಾಷೆಯಲ್ಲಿ ಡಬ್ ಆಗಿದೆ ದೊಡ್ಮನೆ ಕುಡಿಯ ‘ಯುವ’ ಸಿನಿಮಾ

ದೊಡ್ಮನೆ ಕುಡಿ ಯುವರಾಜ್‌ಕುಮಾರ್ ನಟನೆಯ ‘ಯುವ’ ಸಿನಿಮಾ ಒಟಿಟಿಗೆ ಲಗ್ಗೆ ಇಟ್ಟಿದ್ದು ಇದೀಗ ಬಹುಭಾಷೆಯಲ್ಲಿ ಯುವ ಸಿನಿಮಾ ಡಬ್ ಆಗಿದೆ.…

52 mins ago

ಕೊನೆಯ ಸ್ಥಾನದೊಂದಿಗೆ ಐಪಿಎಲ್ ಅಂತ್ಯಗೊಳಿಸಿದ ಮುಂಬೈ ಇಂಡಿಯನ್ಸ್

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಶುಕ್ರವಾರ  ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ  ಹಾರ್ದಿಕ್ ಪಾಂಡ್ಯ ಪಡೆ ಮುಂಬೈ ಇಂಡಿಯನ್ಸ್ ಸೋಲನುಭವಿಸಿದೆ.

1 hour ago

8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌: ಗುಡುಗು, ಮಿಂಚು ಸಹಿತ ಮಳೆ ಸಾಧ್ಯತೆ

ರಾಜ್ಯಾದ್ಯಂತ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು,  40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಿ, ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ.

2 hours ago

ಸ್ವಾತಿ ಮಲಿವಾಲ್‌ ಮೇಲೆ ದೂರು ದಾಖಲಿಸಿದ ಆರೋಪಿ ಬಿಭವ್‌

ಆಪ್‌ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣದ ಆರೋಪಿಯಾಗಿರುವ ಬಿಭವ್‌ ಕುಮಾರ್‌ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಗೆ…

2 hours ago