ಬೆಂಗಳೂರು: ಶಿವಾಜಿ ಸುರತ್ಕಲ್ ಚಿತ್ರ ಸಸ್ಪೆನ್ಸ್ ಆಗಿ ಮೂಡಿಬಂದಿದೆ. ‘ಶಿವಾಜಿ ಸುರತ್ಕಲ್ 1’ ಚಿತ್ರದ ಯಶಸ್ಸಿನ ನಂತರ ರಮೇಶ್ ಅರವಿಂದ್ ‘ಶಿವಾಜಿ ಸುರತ್ಕಲ್ 2’ ಚಿತ್ರವನ್ನು ಘೋಷಿಸಿದರು.
ಈಗ ‘ದಿ ಮಿಸ್ಟೀರಿಯಸ್ ಕೇಸ್ ಆಫ್ ಮಾಯಾವಿ’ ಎಂಬ ಟ್ಯಾಗ್ ಲೈನ್ ಹೊಂದಿರುವ ಚಿತ್ರದ ಬಿಡುಗಡೆಯ ದಿನಾಂಕವನ್ನು ತಂಡ ಪ್ರಕಟಿಸಿದೆ.
ಚಿತ್ರ ಏಪ್ರಿಲ್ ೧೪ ರಂದು ಬಿಡುಗಡೆಯಾಗಲಿದೆ. ಈ ಚಿತ್ರ ಅದೃಷ್ಟದ ದಿನಾಂಕದಂದು ಬಿಡುಗಡೆಯಾಗುತ್ತಿದೆ ಎಂಬ ಅಭಿಪ್ರಾಯ ಸಿನಿಪ್ರಿಯರ ವಲಯದಲ್ಲಿ ವ್ಯಕ್ತವಾಗಿದೆ.
ಅಂಜನಾದ್ರಿ ಸಿನಿ ಕ್ರಿಯೇಷನ್ಸ್ ಮೂಲಕ ಅನೂಪ್ ಗೌಡ ಮತ್ತು ರೇಖಾ ಕೆ.ಎನ್ ನಿರ್ಮಿಸಿರುವ ಈ ಚಿತ್ರವನ್ನು ಆಕಾಶ್ ಶ್ರೀವತ್ಸ ನಿರ್ದೇಶಿಸಿದ್ದಾರೆ.
ಇದು ರಮೇಶ್ ಅರವಿಂದ್ ಅವರ 103ನೇ ಚಿತ್ರ.