ಭಾರೀ ನಿರೀಕ್ಷೆ ಮೂಡಿಸಿದ್ದ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾ ಟ್ರೈಲರ್ ರಿಲೀಸ್ ಆಗಿ ಭರವಸೆ ಮೂಡಿಸಿದೆ. ಜುಲೈ 21ಕ್ಕೆ ಸಿನಿಮಾ ತೆರೆಗೆ ಬರ್ತಿದ್ದು ಟ್ರೈಲರ್ನಿಂದ ಸಿನಿಮಾ ಮೇಲಿನ ನಿರೀಕ್ಷೆ ಡಬಲ್ ಆಗಿದೆ. ರಿಷಬ್ ಶೆಟ್ಟಿ, ರಮ್ಯಾ, ದಿಗಂತ್, ಲೂಸಿಯಾ ಪವನ್ ಕುಮಾರ್ ಈ ಚಿತ್ರದ ವಿಶೇಷ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.
ಅದ್ಧೂರಿ ಕಾರ್ಯಕ್ರಮದಲ್ಲಿ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಟ್ರೈಲರ್ ಲೋಕಾರ್ಪಣೆ ಆಯಿತು. ಅಶ್ವಿನಿ ಪುನೀತ್ ರಾಜ್ಕುಮಾರ್, ರಿಷಬ್ ಶೆಟ್ಟಿ, ರಕ್ಷಿತ್ ಶೆಟ್ಟಿ, ಧ್ರುವ ಸರ್ಜಾ ಸೇರಿದಂತೆ ಸ್ಯಾಂಡಲ್ವುಡ್ ತಾರೆಯರು ಕಾರ್ಯಕ್ರಮಕ್ಕೆ ಆಗಮಿಸಿ ತಂಡಕ್ಕೆ ಶುಭ ಹಾರೈಸಿದ್ದಾರೆ. ಚಿತ್ರದಲ್ಲಿ ಸ್ಯಾಂಡಲ್ವುಡ್ ಕ್ವೀನ್ ರಮ್ಯಾ ಲೆಕ್ಚರರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ನಿತಿನ್ ಕೃಷ್ಣಮೂರ್ತಿ ನಿರ್ದೇಶನದ ಈ ಚಿತ್ರದಲ್ಲಿ ಸಾಕಷ್ಟು ಹೊಸ ಪ್ರತಿಭೆಗಳು ನಟಿಸಿದ್ದಾರೆ. 500ಕ್ಕೂ ಅಧಿಕ ಕಲಾವಿದರು ಈ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ಚಿತ್ರಕ್ಕಿದೆ. ರಕ್ಷಿತ್ ಶೆಟ್ಟಿ ‘ಪರಂವ’ ಬ್ಯಾನರ್ನಲ್ಲಿ ಸಿನಿಮಾ ಬಿಡುಗಡೆ ಮಾಡುತ್ತಿದ್ದಾರೆ.