ಸಾಂಡಲ್ ವುಡ್

ಇಂದು “ರವಿಕೆ ಪ್ರಸಂಗ” ಸಿನಿಮಾ ರಾಜ್ಯಾದ್ಯಂತ ತೆರೆಗೆ

ಮಂಗಳೂರು: ದೃಷ್ಟಿ ಮೀಡಿಯಾ ಪ್ರೊಡಕ್ಷನ್ ನಡಿ ತಯಾರಾದ ಸಂತೋಷ್ ಕೊಡೆಂಕೇರಿ ನಿರ್ದೇಶನದ ರವಿಕೆ ಪ್ರಸಂಗ ಸಿನಿಮಾ ಇಂದಿನಿಂದ ರಾಜ್ಯಾದ್ಯಂತ ತೆರೆ ಕಾಣಲಿದೆ.

ಕರಾವಳಿ ಜಿಲ್ಲೆಯಲ್ಲೂ ಏಕ ಕಾಲದಲ್ಲಿ ಸಿನಿಮಾ ಬಿಡುಗಡೆಯಾಗಲಿದೆ. ಮಂಗಳೂರಿನಲ್ಲಿ ಪಿವಿಆರ್, ಸಿನಿಪೊಲಿಸ್, ಭಾರತ್ ಸಿನಿಮಾಸ್, ಉಡುಪಿಯಲ್ಲಿ ಡಯನಾ, ಮಣಿಪಾಲದಲ್ಲಿ ಪಿವಿಆರ್ ಐನಾಕ್ಸ್, ಭಾರತ್ ಸಿನಿಮಾಸ್, ಕುಂದಾಪುರದಲ್ಲಿ ಭಾರತ್ ಸಿನಿಮಾಸ್, ಸುರತ್ಕಲ್ ನಲ್ಲಿ ಸಿನಿಗ್ಯಾಲಕ್ಸಿ, ಪಡುಬಿದ್ರೆಯಲ್ಲಿ ಭಾರತ್ ಸಿನಿಮಾಸ್, ಪುತ್ತೂರಿನಲ್ಲಿ ಭಾರತ್ ಸಿನಿಮಾಸ್, ಕಾರ್ಕಳದಲ್ಲಿ ಪ್ಲಾನೆಟ್, ಬೈಂದೂರಿನಲ್ಲಿ ಶಂಕರ್, ಸುಳ್ಯದಲ್ಲಿ ಸಂತೋಷ್ ಚಿತ್ರಮಂದಿರದಲ್ಲಿ ರವಿಕೆ ಪ್ರಸಂಗ ಸಿನಿಮಾ ತೆರೆ ಕಾಣಲಿದೆ.

ರವಿಕೆ ಪ್ರಸಂಗ ಸಿನಿಮಾದ ಟ್ರೈಲರ್ ಈಗಾಗಲೇ ಬಿಡುಗಡೆಗೊಂಡು ಜನರಿಂದ ಮೆಚ್ಚುಗೆ ಗಳಿಸಿದೆ. ಕನ್ನಡದಲ್ಲಿ ಭಿನ್ನ-ವಿಭಿನ್ನ ಟೈಟಲ್‌ಗಳನ್ನಿಟ್ಟುಕೊಂಡು ಸಿನಿಮಾಗಳು ಬರುತ್ತಿವೆ. ಈ ಸಾಲಿಗೆ ಸೇರುವ ಸಿನಿಮಾ ‘ರವಿಕೆ ಪ್ರಸಂಗ’ ಸಿನಿಮಾದ ಟೀಸ‌ರ್ ಮತ್ತು ಟ್ರೈಲರ್ ಬಿಡುಗಡೆಯಾಗಿ ಮೆಚ್ಚುಗೆ ಪಡೆದಿತ್ತು. ರವಿಕೆ ಅಂದರೆ ಬ್ಲೌಸನ್ನು ಪ್ರಮುಖವಾಗಿ ಇಟ್ಟುಕೊಂಡು ಕೌಟುಂಬಿಕ ಕಥಾ ಹಂದರದಿಂದ ಹಾಸ್ಯಭರಿತ ಉತ್ತಮ ಸಂದೇಶವನ್ನು ಸಮಾಜಕ್ಕೆ ತಿಳಿಸುವ ಪ್ರಯತನವನ್ನು ನಿರ್ದೇಶಕರು ರವಿಕೆಪ್ರಸಂಗ ಸಿನಿಮಾದಲ್ಲಿ ಮಾಡಿದ್ದಾರೆ.

‘ದೃಷ್ಟಿ ಮೀಡಿಯಾ’ ಪ್ರೊಡಕ್ಷನ್‌ನಡಿ ಚಿತ್ರ ನಿರ್ಮಾಣವಾಗಿದೆ. ಚಿತ್ರದ ರವಿಕೆ ಸಾಂಗ್ ಅನ್ನು ಚೈತ್ರಾ ಹಾಗೂ ಚೇತನ್ ನಾಯಕ್ ಹಾಡಿದ್ದಾರೆ. ಮನಸಲಿ ಜೋರು ಕಲರವ ಹಾಡನ್ನು ಮಾನಸ ಹೊಳ್ಳ, ಮತ್ತು ಹಸಿಮನಸಲಿ ಹಾಡನ್ನು ಜೋಗಿ ಸುನೀತಾ ಹಾಡಿದ್ದಾರೆ. ಚಿತ್ರದಲ್ಲಿ ನಾಯಕಿಯಾಗಿ ನಟಿಸಿರುವ ಗೀತಾ ಭಾರತಿ ಭಟ್ ಉತ್ತಮ ಅಭಿನಯದೊಂದಿಗೆ ಹಾಡಿಗೆ ಸಖತ್ ಸ್ಟೆಪ್ ಹಾಕಿ ಡ್ಯಾನ್ಸ್ ಮಾಡಿದ್ದಾರೆ.

ರವಿಕೆ ಪ್ರಸಂಗ ಸಿನಿಮಾವನ್ನು ಮಾಷ್೯ ಡಿಸ್ಟ್ರಿಬ್ಯುಟರ್ಸ್ ಸಂಸ್ಥೆ ವಿಶಾಲ ಕರ್ನಾಟಕದಲ್ಲಿ ಬಿಡುಗಡೆಗೊಳಿಸುತ್ತಿದ್ದಾರೆ. ಜೊತೆಗೆ ವಿದೇಶದಲ್ಲೂ ಸಿನಿಮಾ ಬಿಡುಗಡೆಗೊಳ್ಳಲಿದೆ. ಕುಟುಂಬ ಸಮೇತ ನೋಡಬೇಕಾದ ಸಿನಿಮಾ ಇದಾಗಿದೆ. ಪ್ರತಿಯೊಬ್ಬ ಮಹಿಳೆಯರ ಜೀವನದಲ್ಲಿ ನಡೆಯುವಂತಹ ಕತೆಯನ್ನು ಈ ಸಿನಿಮಾ ಹೊಂದಿದೆ. ಈ ಚಿತ್ರಕ್ಕೆ ಪಾವನಾ ಸಂತೋಷ್ ಕಥೆ ಸಂಭಾಷಣೆ ಬರೆದಿದ್ದಾರೆ. ಸಾಮಾನ್ಯವಾಗಿ ಸೀರೆ ಅಂದರೆ ಹೆಣ್ಣು ಮಕ್ಕಳಿಗೆ ಬಹಳ ಇಷ್ಟ ಅದರಲ್ಲೂ ಸೀರೆ ಎಷ್ಟು ಚೆನ್ನಾಗಿರುತ್ತೋ, ಅಷ್ಟೇ ಸುಂದರವಾಗಿ ಬ್ಲೌಸ್ ಇರಬೇಕು. ಸಾವಿರಾರೂ ಖರ್ಚು ಮಾಡಿ ರವಿಕೆ ಹೊಲಿಸುತ್ತಾರೆ. ಒಂದು ಸಮಾರಂಭಕ್ಕೆ ಇಂಥದ್ದೇ ಸೀರೆ ಹೀಗೆ ಇರಬೇಕು ಅಂತ ಆಸೆಯಿಂದ ಒಳ್ಳೆಯ ಟೇಲರ್‌ ಹತ್ತಿರ ರವಿಕೆ ಹೊಲಿಸುತ್ತಾರೆ.

ಆದರೆ, ಪ್ರತಿ ಬಾರಿ ಆ ರವಿಕೆ ಪರ್ಫೆಕ್ಟ್ ಆಗಿ ಇರಲ್ಲ. ಏನೋ ಒಂದು ಸರಿಯಾಗಿರಲ್ಲ. ಇಂಥದ್ದೇ ಸರಿಹೊಂದದ ರವಿಕೆಯ ರಗಳೆಯ ಕಾಮಿಡಿ ಕಥೆ ‘ರವಿಕೆ ಪ್ರಸಂಗ’. ಚಿತ್ರದಲ್ಲಿ ಒಂದು ರವಿಕೆಯಿಂದ ನಾಯಕಿಯ ಜೀವನದಲ್ಲಿ ಏನೆಲ್ಲಾ ಬದಲಾವಣೆ ಆಗುತ್ತೆ ಎನ್ನುವುದನ್ನು ಹೇಳಲಾಗಿದ್ದು, ಚಿತ್ರದಲ್ಲಿ ಮಂಗಳೂರು ಕನ್ನಡ ಶೈಲಿ ಬಳಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಸುತ್ತಮುತ್ತಲು ಚಿತ್ರೀಕರಣ ನಡೆದಿದೆ. ಸಿನಿಮಾದ ಬಗ್ಗೆ ಪ್ರೇಕ್ಷಕರಿಗೆ ಬಹಳ ಕುತೂಹಲವಿದೆ. ಇಂದು “ರವಿಕೆಪ್ರಸಂಗ” ರಾಜ್ಯಾದ್ಯಂತ ತೆರೆಕಾಣಲಿದೆ.

Gayathri SG

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

3 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

4 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

4 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

4 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

5 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

5 hours ago