News Karnataka Kannada
Thursday, May 02 2024
ಸಾಂಡಲ್ ವುಡ್

ಯಶ್​ ಮನೆಗೆ ಬಂತು ಹೊಸ ಐಷಾರಾಮಿ ರೇಂಜ್​ ರೋವರ್ ಕಾರು

yash family
Photo Credit : Twitter

ನಟ ಯಶ್​ ಅವರು ಕೇವಲ ಸ್ಯಾಂಡಲ್​ವುಡ್​ಗೆ ಸೀಮಿತ ಆಗಿಲ್ಲ. ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಬ್ಲಾಕ್​ ಬಸ್ಟರ್​ ಹಿಟ್​ ಆದ ಬಳಿಕ ಅವರ ಡಿಮ್ಯಾಂಡ್​ ಹೆಚ್ಚಿದೆ. ಅದಕ್ಕೆ ತಕ್ಕಂತೆ ಅವರ ಲೈಫ್​ಸ್ಟೈಲ್​ ಕೂಡ ಬದಲಾಗಿದೆ. ಈಗ ಯಶ್​ ಮನೆಗೆ ಹೊಸ ಐಷಾರಾಮಿ ಕಾರು ಬಂದಿದೆ. ರೇಂಜ್​ ರೋವರ್​ ಕಾರನ್ನು ಯಶ್​ ಖರೀದಿಸಿದ್ದಾರೆ. ಕಪ್ಪು ಬಣ್ಣದ ಕಾರಿನಲ್ಲಿ ಅವರು ಪತ್ನಿ ರಾಧಿಕಾ ಪಂಡಿತ್​ ಜೊತೆ ಸುತ್ತಾಡಿದ್ದಾರೆ. ಈ ಖುಷಿಯ ಸಂದರ್ಭದಲ್ಲಿ ಯಶ್​ ಅವರ ಮಕ್ಕಳಾದ ಯಥರ್ವ್​ ಮತ್ತು ಆಯ್ರಾ ಕೂಡ ಪೋಸ್​ ನೀಡಿದ್ದಾರೆ. ಹೊಸ ಕಾರಿನಲ್ಲಿ ಸುತ್ತಾಡಿದ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ.

ಹೊಸ ಕಾರು ಖರೀದಿಸಿರುವ ಯಶ್​ಗೆ ಎಲ್ಲರೂ ಅಭಿನಂದನೆ ಸಲ್ಲಿಸುತ್ತಿದ್ದಾರೆ. ಅವರು ವೃತ್ತಿಜೀವನದಲ್ಲಿ ಇನ್ನಷ್ಟು ಯಶಸ್ಸು ಕಾಣಲಿ ಎಂದು ಫ್ಯಾನ್ಸ್​ ಹಾರೈಸುತ್ತಿದ್ದಾರೆ. ಈ ಹೊಸ ರೇಂಜ್​ ರೋವರ್​ ಕಾರಿನ ಬೆಲೆ ಬರೋಬ್ಬರಿ 4 ಕೋಟಿ ರೂಪಾಯಿ! ಅನೇಕ ಐಷಾರಾಮಿ ಸೌಲಭ್ಯಗಳು ಈ ಕಾರಿನಲ್ಲಿವೆ.

ಇನ್ನು ಅವರ ಸಿನೆಮಾ ವಿಚಾರಕ್ಕೆ ಬರುವುದಾದರೆ, ಯಶ್​ ಅವರ 19ನೇ ಸಿನಿಮಾ ಬಗ್ಗೆ ತುಂಬ ಕುತೂಹಲ ಇದೆ. ಈ ಸಿನಿಮಾಗೆ ಯಾರು ನಿರ್ದೇಶನ ಮಾಡುತ್ತಾರೆ? ಬಂಡವಾಳ ಹೂಡಲಿರುವುದು ಯಾರು? ಸಿನಿಮಾದ ಶೀರ್ಷಿಕೆ ಏನು ಎಂಬಿತ್ಯಾದಿ ಪ್ರಶ್ನೆಗಳಿಗೆ ಉತ್ತರ ತಿಳಿಯಲು ಫ್ಯಾನ್ಸ್​ ಕಾತುರರಾಗಿದ್ದಾರೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು