ಕನ್ನಡಚ ಚಿತ್ರರಂಗದ ರಾಕಿಭಾಯ್ ಯಶ್ ಹೊಸ ಸಿನಿಮಾ ಮಾಡುತ್ತಿದ್ದಾರೆ ಎಂದು ಹೇಳಲಾಗುತ್ತಿದ್ದು, ಈ ಚಿತ್ರಕ್ಕೆ ನಾಯಕಿಯಾಗಿ ಸಾಯಿ ಪಲ್ಲವಿ ಆಯ್ಕೆಯಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ, ಇದು ಇನ್ನೂ ಅಧಿಕೃತವಾಗಿಲ್ಲ.
ಇನ್ನು ಇಷ್ಟು ದಿನ ತೆರೆಮೆರೆಯಲ್ಲಿ ತಮ್ಮ ಹೊಸ ಸಿನಿಮಾದ ಕೆಲಸ ಮಾಡುತ್ತಿದ್ದ ಯಶ್, ಅಭಿಮಾನಿಗಳಿಗೆ ಹೊಸ ಸುದ್ದಿ ನೀಡುತ್ತಿದ್ದಾರೆ. ಮೊನ್ನೆಯಷ್ಟೇ ಲೋಡಿಂಗ್ ಎಂದು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದವರು, ಕಳೆದ ದಿನ ತಮ್ಮ ಹೊಸ ಸಿನಿಮಾದ ಟೈಟಲ್ ಘೋಷಣೆ ಮಾಡುವ ಬಗ್ಗೆ ಮಾಹಿತಿ ನೀಡಿದ್ದಾರೆ. ಡಿಸೆಂಬರ್ 8ರಂದು ಮುಂಜಾನೆ 9.55ಕ್ಕೆ ಹೊಸ ಸಿನಿಮಾದ ಶೀರ್ಷಿಕೆ ಅನಾವರಣ ಮಾಡುವುದಾಗಿ ತಿಳಿಸಿದ್ದಾರೆ.
ಇತ್ತ ನಟಿ ಸಾಯಿ ಪಲ್ಲವಿ ‘ಪ್ರೇಮಂ’ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟರು. ಈ ಸಿನಿಮಾ ಯಶಸ್ಸು ಕಂಡಿತು. ಆ ಬಳಿಕ ಅವರು ಹಲವು ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಅವರು ಕನ್ನಡದ ಸಿನಿಮಾದಲ್ಲಿ ಇನ್ನೂ ನಟಿಸಿಲ್ಲ. ಈಗ ಹರಿದಾಡುತ್ತಿರುವ ಸುದ್ದಿ ನಿಜವೇ ಆದರೆ ‘ಯಶ್ 19’ ಸಿನಿಮಾ ಮೂಲಕ ಸ್ಯಾಂಡಲ್ವುಡ್ಗೆ ಕಾಲಿಡಲಿದ್ದಾರೆ. ಡಿಸೆಂಬರ್ 8ರಂದು ಈ ಬಗ್ಗೆ ಘೋಷಣೆ ಆಗಲಿದೆ.